ಹಾಸನ: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಝೆಡ್.ಜಮೀರ್ ಅಹಮ್ಮದ್ ಖಾನ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸುವಷ್ಟು ಶಕ್ತಿ ಇಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.

ಚನ್ನರಾಯಪಟ್ಟಣ ತಾಲ್ಲೂಕಿನ ಆಲಗೊಂಡನಹಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆಮಾತನಾಡಿದ ಅವರು, ‘ನಾವು ಪಡುವಲಹಿಪ್ಪೆ ಹತ್ತಿರ ಹೊಲ ಉತ್ಕಂಡು ಇರೋರು.ಹಾಗಾಗಿ ಐ.ಟಿ, ಇ.ಡಿ ಗೊತ್ತಿಲ್ಲ. ದೊಡ್ಡವರು, ಸಾಹುಕಾರರಿಗೆ ಅದು ಗೊತ್ತಿರುತ್ತೆ. ಆದ್ದರಿಂದ ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.

ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡಗೆ ಸಚಿವ ಸ್ಥಾನ ತಪ್ಪಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೇವಣ್ಣ, ‘ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿಬಿಳಿಕೆರೆ (ಮೈಸೂರು)–ಹಾಸನ–ಬೇಲೂರು ನಡುವಿನ ರಾಷ್ಟ್ರೀಯ ಹೆದ್ದಾರಿ 373 ಅನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಮಾಡಿದ ಮನವಿಗೆ ಸಮ್ಮತಿಸಿದ್ದಾರೆ. ಯಾರಿಗೂ ಸಚಿವ ಸ್ಥಾನ ತಪ್ಪಿಸಿಲ್ಲ. ನಮ್ಮ ಮಾತು ಕೇಳುವವರು ಯಾರಿದ್ದಾರೆ. ವೈಯಕ್ತಿಕವಾಗಿ ಯಾರನ್ನು ದ್ವೇಷ ಮಾಡಲ್ಲ’ ಎಂದು ತಿಳಿಸಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಸಿ.ಎನ್.ಬಾಲಕೃಷ್ಣ ಅವರೇ ಜೆಡಿಎಸ್ ಅಭ್ಯರ್ಥಿ ಎಂದು ಪ್ರಕಟಿಸಿದರು.

ಎಲ್ಲರಿಗೂ ಸಚಿವ ಸ್ಥಾನ ನೀಡಲು ಅವಕಾಶವಿಲ್ಲ: ಬೈರತಿ ಬಸವರಾಜ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.