ಹಾಸನ: ‘ಐಎಂಎ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಆದರೂ ನನ್ನ ಹೆಸರು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಭಾನುವಾರ
ಭಾಗವಹಿಸಿ, ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶಾಸಕರೊಬ್ಬರು ಇಫ್ತಿಯಾರ್ ಊಟಕ್ಕೆ ಕರೆದುಕೊಂಡುಹೋಗಿದ್ದ ವೇಳೆ ಆ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಹಾಕಿದ್ದರು. ಅಲ್ಲಿದ್ದ ಇಬ್ಬರು ವ್ಯಕ್ತಿಗಳು ಯಾರು ಎಂದು ಗೊತ್ತಿರಲಿಲ್ಲ. ದೇಶದಲ್ಲಿ ಅತಿ ಹೆಚ್ಚಿನ ಆದಾಯ ತೆರಿಗೆ ಪಾವತಿಸಿರುವ ಸಂಸ್ಥೆ ಎಂದು ನರೇಂದ್ರ ಮೋದಿ ಪ್ರಮಾಣ ಪತ್ರ ನೀಡಿದ್ದಾರೆ ಅಂತ ಅಲ್ಲಿದ್ದ ವ್ಯಕ್ತಿಯನ್ನು ನನಗೆ ಪರಿಚಯಿಸಿದ್ದರು. ಸಿಸಿಬಿ ತನಿಖೆ ನಡೆದಿದೆ. ಸಿಬಿಐ ತನಿಖೆಯೂ ನಡೆಯುತ್ತಿದೆ’ಎಂದರು.

‘ಜನಗಣತಿ ವರದಿ ಆಧರಿಸಿ ಮೀಸಲಾತಿ ನೀಡಬೇಕೆಂಬ ಮಾತು ಕೇಳಿ ಬಂದಿದೆ.ಮೀಸಲಾತಿ ವಿಷಯಕ್ಕೆ ಸಂಬಂಧಪಟ್ಟಂತೆ ಸಮಾಜದಲ್ಲಿ ಸಂಘರ್ಷಗಳಿಗೆ ಎಡೆ ಮಾಡಿಕೊಡದೆ ಪ್ರತಿಯೊಂದು ಸಮಾಜದ ಕಡುಬಡವರಪರಿಸ್ಥಿತಿ ಆಧಾರದ ಮೇಲೆ ರಾಜಕೀಯ ಬೆರಸದೆ ಅರ್ಹರಿಗೆ ಮೀಸಲಾತಿ ಸದುಪಯೋಗ ಆಗಬೇಕು’ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.