ಸಕಲೇಶಪುರ: ಎತ್ತಿನಹೋಳೆ ಯೋಜನೆ ಮೊದಲನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡುತ್ತಿರುವುದು ಸ್ವಾಗತಾರ್ಹ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಮುರಳಿ ಮೋಹನ್ ಹೇಳಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸಿ ಅಂರ್ತಜಲ ಮಟ್ಟ ಹೆಚ್ಚು ಮಾಡುವ ಈ ಯೋಜನೆ ರಾಜ್ಯದ ಅತ್ಯುತ್ತಮ ಯೋಜನೆಗಳಲ್ಲಿ ಒಂದಾಗಿದೆ.

‘2014 ರಲ್ಲಿ ಸಿದ್ದರಾಮಯ್ಯ ಸರ್ಕಾರ ಎತ್ತಿನಹೊಳೆ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಿತ್ತು. ಸುಮಾರು 10 ವರ್ಷಗಳ ನಂತರ 2024ರಲ್ಲಿ ಯೋಜನೆ ಪೂರ್ಣಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಲೋಕಾರ್ಪಣೆ ಮಾಡುತ್ತಿರುವುದು ಸಂತಸ ತಂದಿದೆ’ ಎಂದರು.

ಹೆಬ್ಬನಹಳ್ಳಿಯಲ್ಲಿ ನಡೆಯುವ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಾಲ್ಲೂಕಿನಿಂದ 5 ಸಾವಿಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುತ್ತಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಕಾಂಗ್ರೆಸ್ ಮುಖಂಡರಾದ ಬಿ.ಡಿ. ವಿಜಯ್‌ಕುಮಾರ್, ಬೈಕೆರೆ ದೇವರಾಜ್, ಸೈಯದ್ ಮುಫೀಜ್, ವಿಜಯ್ ಕುಮಾರ್, ಕಲ್ಗಣೆ ಪ್ರಶಾಂತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.