ಸೋಮವಾರ, 2 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೇಮಾವತಿ ಒಳಹರಿವು ಹೆಚ್ಚಳ: ಯಾವುದೇ ಕ್ಷಣದಲ್ಲಿ ನದಿಗೆ ನೀರು

Published 18 ಜುಲೈ 2024, 8:01 IST
Last Updated 18 ಜುಲೈ 2024, 8:01 IST
ಅಕ್ಷರ ಗಾತ್ರ

ಹಾಸನ: ಹೇಮಾವತಿ ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಗುರುವಾರ ಬೆಳಿಗ್ಗೆ ಜಲಾಶಯಕ್ಕೆ 30,547 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಯಾವುದೇ ಕ್ಷಣದಿಂದ ನದಿಗೆ ನೀರು ಬಿಡಲಾಗುವುದು ಎಂದು ಹೇಮಾವತಿ ಯೋಜನಾ ವೃತ್ತದ ಎಂಜಿನಿಯರ್‌ ತಿಳಿಸಿದ್ದಾರೆ.

ಜಲಾಶಯದ ಗರಿಷ್ಠ ಮಟ್ಟ 2922 ಅಡಿಗಳಾಗಿದ್ದು, ಗುರುವಾರ 2912.55 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಗೆ 9.45 ಅಡಿ ಬಾಕಿ ಇದೆ. ಜಲಾನಯದ ಪ್ರದೇಶದಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ಹೆಚ್ಚಿನ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುವ ಸಾಧ್ಯತೆ ಇದೆ. ಹೀಗಾಗಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಹೊರಗೆ ಬಿಡುವ ಸಾಧ್ಯತೆ ಎಂದು ತಿಳಿಸಿದ್ದಾರೆ.

ನದಿ ತೀರದಲ್ಲಿ ಹಾಗೂ ಆಸುಪಾಸಿನ ಗ್ರಾಮಗಳಲ್ಲಿ ವಾಸಿಸುವ ಜನರು ಸುರಕ್ಷಿತ ಪ್ರದೇಶಗಳಿಗೆ ತಕ್ಷಣವೇ ತೆರಳಬೇಕು. ಸಂಬಂಧಿಸಿದ ನೀರಾವರಿ ಇಲಾಖೆ ಅಧಿಕಾರಿಗಳು, ತಹಶೀಲ್ದಾರರು, ಕಂದಾಯ ಅಧಿಕಾರಿಗಳು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು. ನದಿ ತೀರದ ಜನರಿಗೆ ಸೂಕ್ತ ತಿಳಿವಳಿಕೆ ನೀಡಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT