ಹೊಳೆನರಸೀಪುರ: ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡುತ್ತಿದ್ದ ಟಿ.ಎ. ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಓಹಿಲೇಶ್ ಹೇಳಿದರು.

ವೇದಿಕೆ ಗಾಂಧಿ ವೃತ್ತದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕರವೇ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು, ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪೊಲೀಸರು ಹಾಗೂ ಸರ್ಕಾರದ ವಿರುದ್ ಹೋರಾಟಗಾರರು ಘೋಷಣೆ ಕೂಗಿದರು. ಹಾಸನ ಮೈಸೂರು ರಸ್ತೆಯಲ್ಲಿರುವ ಕನಕ ಭವನದಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಗಾಂಧಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ನಂತರ ತಾಲ್ಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ವೇದಿಕೆಯ ತಾಲ್ಲೂಕು ಯುವ ಘಟಕದ ಅಧ್ಯಕ್ಷ ನವೀನ್‍ಕುಮಾರ್, ಬಿ.ಆರ್. ರೇವಣ್ಣ, ಎಚ್.ಟಿ. ವೆಂಕಟಸ್ವಾಮಿ, ಎಂ.ಎನ್. ಪುಟ್ಟರಾಜು, ಚಂದ್ರಶೇಖರ್, ಎಸ್.ಕೆ. ಕುಮಾರನಾಯಕ್, ಚಂದ್ರಶೇಖರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.