ಆಲೂರು: ತಾಲ್ಲೂಕು ಕೇಂದ್ರಕ್ಕೆ ರಾಜಹಂಸ ಮತ್ತು ಸುವಿಹಾರಿ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ಬಸ್ಸುಗಳು ಬಂದು ಹೋಗಬೇಕೆಂಬ ಇಲಾಖೆ ಅದೇಶವಿದ್ದರೂ, ಕೆಲವು ಬಸ್‌ಗಳು ಪಟ್ಟಣ ಪ್ರವೇಶಿಸದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿರುವುದನ್ನು ವಿರೋಧಿಸಿ, ಸ್ಥಳೀಯ ಸಂಘಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಸಾರಿಗೆ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿ ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾದರ್ ಅವರಿಗೆ ಮನವಿ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಚಾಲಕರು ಮತ್ತು ನಿರ್ವಾಹಕರು ರಾತ್ರಿ ವೇಳೆಯಲ್ಲಿ ಆಲೂರು ಪಟ್ಟಣದ ನಿಲ್ದಾಣಕ್ಕೆ ಬಾರದೆ, ಆಲೂರು ಕೂಡಿಗೆಯ ಬೈಪಾಸ್‌ನಿಂದ ನೇರ ಸಕಲೇಶಪುರ ಮತ್ತು ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದಾರೆ. ಪ್ರಶ್ನೆ ಮಾಡಿದರೆ ಚಾಲಕ, ನಿರ್ವಾಹಕರು ಪ್ರಯಾಣಿಕರೊಡನೆ ಉಡಾಫೆ ಉತ್ತರ ನೀಡುವ ಮೂಲಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ದೂರಿದರು.

ಹಾಸನದಿಂದ ಆಲೂರಿಗೆ ಟಿಕೆಟ್ ಪಡೆದುಕೊಂಡ ಪ್ರಯಾಣಿಕರನ್ನು, ಆಲೂರು ಬೈಪಾಸ್ ಕೂಡಿಗೆಯಲ್ಲಿ ಅಥವಾ ಬೈರಾಪುರ ಸರ್ಕಲ್‍ನಲ್ಲಿ ಇಳಿಸಿದ್ದಾರೆ. ಪಟ್ಟಣಕ್ಕೆ ಸುಮಾರು ಎರಡು ಕಿ.ಮೀ. ನಡೆದು ಬರಲು ರಾತ್ರಿ ಮಹಿಳೆಯರು, ಮಕ್ಕಳು ಮತ್ತು ವಯೋವೃದ್ಧರು ತೀವ್ರ ಭಯಪಡುತ್ತಾರೆ. ಅನಾಹುತ, ಅವಘಡಗಳು ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸಿದರು, ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಕೂಡಲೆ ಸರ್ಕಲ್ ಇನ್ಸ್ಪೆಕ್ಟರ್ ಗಂಗಾಧರ್ ರವರು ಸಾರಿಗೆ ಇಲಾಖೆ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು. ಶೀಘ್ರ ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.