ಹಾಸನ: ಕೋವಿಡ್ ಹಿನ್ನೆಲೆಯಲ್ಲಿ ವಿವಾಹ ಮತ್ತಿತರ ಸಮಾರಂಭಗಳಲ್ಲಿ ನಿಯಮ ಉಲ್ಲಂಘಿಸುವ ಕಲ್ಯಾಣ ಮಂಟಪ ಮಾಲೀಕರಿಗೆ ದಂಡ ವಿಧಿಸಿ ಎಂದು ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕಲ್ಯಾಣ ಮಂಟಪ, ಸಮುದಾಯ ಭವನ ನಡೆಯುವ ವಿವಾಹ ಹಾಗೂ ಮತ್ತಿತರ ಸಮಾರಂಭದಲ್ಲಿ200ಕ್ಕೂ ಅಧಿಕ ಜನ ಸೇರದಂತೆ ಮಿತಿಯನ್ನು ನಿರ್ವಹಿಸಲು ಮಾಲೀಕರಿಗೆ ನಿರ್ವಹಿಸಲು ನೋಟಿಸ್ ನೀಡಿ. ಆದೇಶ ಪಾಲಿಸದಿದ್ದಲ್ಲಿ ದಂಡ ವಿಧಿಸಿ ಎಂದು ಹೇಳಿದರು.

‘ನಗರದಲ್ಲಿ ಹೆಚ್ಚು ಜನಸಂದಣಿ ಸೇರದಂತೆ ನಿಯಂತ್ರಿಸಿ ಹಾಗೂ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರಿಗೆ ದಂಡ ವಿಧಿಸಿ. ಕೋವಿಡ್-19 ಹರಡುವುದನ್ನು ತಡೆಗಟ್ಟಲು ಎಲ್ಲಾ ರೀತಿಯ ಮುಂಜಾಗ್ರತಾಕ್ರಮಗಳನ್ನು ಕೈಗೊಳ್ಳಿ. ಇದಕ್ಕಾಗಿ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಿ’ ಎಂದು ನಿರ್ದೇಶಿಸಿದರು.

‘ತಾಲ್ಲೂಕು ಆಸ್ಪತ್ರೆಗಳಲ್ಲಿಕೋವಿಡ್ ಚಿಕಿತ್ಸೆ ವ್ಯವಸ್ಥೆಗಳನ್ನು ಇನ್ನಷ್ಟು ಉತ್ತಮಪಡಿಸಿ. ಕೋರ್ಟ್‌ಗೆ ಪ್ರತಿದಿನ ಬರುವ ಕಕ್ಷಿದಾರರನ್ನು ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆಯೇಎಂದು ಉಪವಿಭಾಗಾಧಿಕಾರಿಗಳು ಪರಿಶೀಲನೆನಡೆಸಬೇಕು’ ಎಂದು ತಿಳಿಸಿದರು.

‘ಕೋವಿಡ್‌ಗೆ ಲಸಿಕೆ ಶೀಘ್ರವೇ ಜಿಲ್ಲೆಗೆ ತಲುಪಬಹುದು. ಅದರ ಶೇಖರಣೆಗೆ ಹೆಚ್ಚುವರಿಯಾಗಿ ಘಟಕಗಳನ್ನು ಸ್ಥಾಪಿಸಿ ವಿತರಣೆಗಾಗಿ ವ್ಯವಸ್ಥಿತ ಯೋಜನೆ ರೂಪಿಸಿ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ‘ಕೋವಿಡ್ ನಿಯಂತ್ರಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮವನ್ನು ವಿವರಿಸಿದರು. ಈಗಿನ ಮದುವೆ ಮ್ತತಿತರ ಸಮಾರಂಭದಲ್ಲಿ 200ರವರೆಗೆ ಜನರು ಮಾತ್ರ ಸೇರುವ ಅವಕಾಶವಿದ್ದು, ನಿಯಮ ಉಲ್ಲಂಘಿಸಿ ಸಮಾರಂಭ ನಡೆಸುವಕಟ್ಟಡದ ಮಾಲೀಕರು, ವಧು– ವರರ ಕುಟುಂಬದವರ ವಿರುದ್ಧ ದಂಡ ವಿಧಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಅನುಷ್ಠಾನಕ್ಕೆಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ ಪರಮೇಶ್, ಹಿಮ್ಸ್ ನಿರ್ದೇಶಕಡಾ.ಬಿ.ಸಿ. ರವಿಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ಸತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಉಪವಿಭಾಗಾಧಿಕಾರಿಗಳಾದ ಗಿರೀಶ್ ನಂದನ್ ಹಾಗೂ ಬಿ.ಎ. ಜಗದೀಶ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.