ಹಾಸನ: ₹1.49 ಕೋಟಿ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಣನೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿ.ಎನ್. ಭುವನ್ ಅವರನ್ನು ಅಮಾನತು ಮಾಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ.

ಕೊಣನೂರು ಗ್ರಾಮ ಪಂಚಾಯತಿ ಜೊತೆಗೆ ಗಂಗೂರು ಗ್ರಾಮ ಪಂಚಾಯಿತಿ ಪ್ರಭಾರ ಕಾರ್ಯದರ್ಶಿಯಾಗಿದ್ದ ಭುವನ್, 15ನೇ ಹಣಕಾಸು ಯೋಜನೆಯಡಿ, ಗ್ರಾಮ ಪಂಚಾಯಿತಿ ಸ್ವಂತ ಸಂಪನ್ಮೂಲ, ಸಿಬ್ಬಂದಿ ವೇತನ ಖಾತೆ, ಗ್ರಾಮೀಣ ಯೋಜನೆಯಲ್ಲಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ.

ನಿಯಮಬಾಹಿರವಾಗಿ ₹1,49,78,753 ಹಣ ದುರುಪಯೋಗ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.