ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರೂಣ ಲಿಂಗ ಪತ್ತೆ, ಹತ್ಯೆ ಅಪರಾಧ: ಡಾ.ಅನಿಲ್

ರಾಷ್ಟ್ರೀಯ ಆರೋಗ್ಯ ಅಭಿಯಾನಕ್ಕೆ ಚಾಲನೆ: ಡಿಎಚ್ಒ ಅನಿಲ್‌
Published 11 ಡಿಸೆಂಬರ್ 2023, 13:04 IST
Last Updated 11 ಡಿಸೆಂಬರ್ 2023, 13:04 IST
ಅಕ್ಷರ ಗಾತ್ರ

ಹಾಸನ: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಅಪರಾಧವಾಗಿದೆ. ನಕಲಿ ವೈದ್ಯರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಗಳ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಜಿಲ್ಲಾ ಆರೋಗ್ಯ ಇಲಾಖೆ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡುವುದು ಕಾನೂನು ಬಾಹಿರ. ನಕಲಿ ವೈದ್ಯರು ಹಾಗೂ ಕ್ಲಿನಿಕ್ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ. ಪ್ರತಿ ಹಳ್ಳಿಗಳ ಪ್ರತಿ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸಲಾಗುವುದು. ಬಸ್ ನಿಲ್ದಾಣ, ಪ್ರಮಖ ವೃತ್ತಗಳು, ಸಂತೆ, ಮಾರುಕಟ್ಟೆ ಪ್ರದೇಶ ಸೇರಿದಂತೆ ಜನನಿಬೀಡ ಸ್ಥಳಗಳಲ್ಲಿ ಜಾಗೃತಿ ‌ಕಾರ್ಯಕ್ರಮ ನಡೆಯಲಿದೆ ಎಂದರು. 

ತಾಯಿ ಮತ್ತು ಶಿಶು ಮರಣ ತಡೆಯುವ ಹಾಗೂ ಇವರಿಗೆ ಆಸ್ಪತ್ರೆಯಿಂದ ಸಿಗುವ ಸೌಲಭ್ಯ ಕುರಿತು ಗ್ರಾಮೀಣ ಮಟ್ಟಗಳಲ್ಲಿ ಮಾಹಿತಿ ತಲುಪಿಸುವ ಕೆಲಸ ಮಾಡಲಾಗುವುದು ಎಂದರು. ರಾಜ್ಯದಲ್ಲಿ 1,400ಕ್ಕೂ ಹೆಚ್ಚು ನಕಲಿ ವೈದ್ಯರು ಇರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ ಎಚ್ಚರಿಕೆ ನೀಡಬೇಕಾದ ಅನಿವಾರ್ಯತೆ ಇದೆ ಎಂದರು.

ಜಾನಪದ ಕಲಾತಂಡದವರಿಂದ ಅರಿವು ಮೂಡಿಸುವ ಬೀದಿ ನಾಟಕ, ಚಕ್ಕಲ ಬೊಂಬೆ ಪ್ರದರ್ಶಿಸಲಾಯಿತು. ಆರ್‌ಸಿಎಚ್ ಅಧಿಕಾರಿ ಡಾ. ಚೇತನ್, ಡಾ.ಹರೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಶಿವಶಂಕರ್, ಮಂಜುಳಾ, ಕಲಾವಿದರಾದ ಬಿ.ಟಿ. ಮಾನವ, ಗ್ಯಾರಂಟಿ ರಾಮಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT