ಹಾಸನ: ಭೂಕುಸಿತದಿಂದ ತತ್ತರಿಸಿದ್ದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ –75ರ ಶಿರಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆಯೂ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸಕಲೇಶಪುರ ತಾಲ್ಲೂಕಿನ ದೊಡ್ಡ ತಪ್ಪಲೆ ಭೂಕುಸಿತ ಸಂಭವಿಸಿದ್ದರಿಂದ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ವಾಹನ ಸಂಚಾರ ನಿರ್ಬಂಧಿಸಿ ಜುಲೈ 16 ರಂದು ಆದೇಶ ಹೊರಡಿಸಿದ್ದರು.

ಆದರೆ, ವಾಹನ ದಟ್ಟಣೆ ಹೆಚ್ಚಿದ್ದರಿಂದ ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮಾತ್ರ ವಾಹನ ಸಂಚಾರ ನಿರ್ಬಂಧಿಸಿ, ಸಕಲೇಶಪುರ ಉಪ ವಿಭಾಗಾಧಿಕಾರಿ ಡಾ.ಎಂ.ಕೆ. ಶ್ರುತಿ ಮತ್ತೊಂದು ಆದೇಶ ಹೊರಡಿಸಿದ್ದರು. ಈಗ ಸಂಚಾರ ಯಥಾಸ್ಥಿತಿಗೆ ಮರಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.