ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ | 6 ಮಕ್ಕಳ ಸಾವು, ಇಬ್ಬರಿಗೆ ಡೆಂಗಿ ದೃಢ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗಿ ಪ್ರಕರಣ: ಜಿಲ್ಲಾ ಆಸ್ಪತ್ರೆಯ ಹಾಸಿಗೆ ಭರ್ತಿ
Published : 6 ಜುಲೈ 2024, 6:24 IST
Last Updated : 6 ಜುಲೈ 2024, 6:24 IST
ಫಾಲೋ ಮಾಡಿ
Comments

ಹಾಸನ: ಜಿಲ್ಲೆಯಲ್ಲಿ ಡೆಂಗಿ ಜ್ವರ ಉಲ್ಬಣಗೊಂಡಿದ್ದು, ಶಂಕಿತ ಜ್ವರದಿಂದ ಆರು ಮಕ್ಕಳು ಮೃತಪಟ್ಟಿದ್ದಾರೆ. ಅವರಲ್ಲಿ ಇಬ್ಬರಿಗೆ ಡೆಂಗಿ ಇದ್ದುದು ದೃಢಪಟ್ಟಿದೆ.

ಜಿಲ್ಲಾಸ್ಪತ್ರೆಯಲ್ಲಿ ಐವರು ಮೃತಪಟ್ಟರೆ, ಮೈಸೂರಿನ ಆಸ್ಪತ್ರೆಯಲ್ಲಿ ಒಂದು ಮಗು ಮೃತಪಟ್ಟಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ 39 ಮಕ್ಕಳು ಶಂಕಿತ ಡೆಂಗಿಗೆ ಚಿಕಿತ್ಸೆ ಪಡೆಯುತ್ತಿದ್ದು, 8 ಮಕ್ಕಳು ತೀವ್ರ ನಿಗಾ ಘಟಕದಲ್ಲಿದ್ದಾರೆ.

ಮೃತಪಟ್ಟ ನಾಲ್ವರು ಬಾಲಕಿಯರ ಪೈಕಿ ಹೊಳೆನರಸೀಪುರ ತಾಲ್ಲೂಕಿನ ಮೂವರಿದ್ದಾರೆ. ಇಬ್ಬರು ಹೊರ ಜಿಲ್ಲೆಯವರು.

ವಯಸ್ಕರಲ್ಲಿಯೂ ಡೆಂಗಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಬಳಲುತ್ತಿರುವವರು ಪ್ಲೇಟ್‌ಲೆಟ್‌ಗಳು ಕಡಿಮೆಯಾಗುತ್ತಿದ್ದಂತೆಯೇ ಜಿಲ್ಲಾಸ್ಪತ್ರೆಗೆ ದಾಖಲಾಗುತ್ತಿದ್ದು, ಹಾಸಿಗೆಗಳ ಕೊರತೆ ಎದುರಾಗುವ ಲಕ್ಷಣಗಳು ದಟ್ಟವಾಗಿವೆ.

‘ಹಾಸನ ವೈದ್ಯಕೀಯ ಕಾಲೇಜಿನ 750 ಹಾಸಿಗೆಗಳ ಪೈಕಿ 729 ಭರ್ತಿಯಾಗಿವೆ. ಜನವರಿಯಿಂದ ಇಲ್ಲಿಯವರೆಗೆ 1,630 ಡೆಂಗಿ ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಮಕ್ಕಳು ತಡವಾಗಿ ದಾಖಲಾಗಿದ್ದರಿಂದ ಮೃತಪಟ್ಟರು’ ಎಂದು ಹಾಸನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಹಿಮ್ಸ್‌) ನಿರ್ದೇಶಕ ಡಾ.ಎಸ್‌.ವಿ. ಸಂತೋಷ್‌ ತಿಳಿಸಿದ್ದಾರೆ.

ಈ ಬಗ್ಗೆ ತುರ್ತು ಸಭೆ ನಡೆಸಿರುವ ಸಂಸದ ಶ್ರೇಯಸ್‌ ಪಟೇಲ್‌, ‘ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜ್ವರದಿಂದ ಸಾವು ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಸದ್ಯ 213 ಡೆಂಗಿ ಪ್ರಕರಣಗಳು ದೃಢಪಟ್ಟಿವೆ. 29 ಚಿಕೂನ್ ಗುನ್ಯಾ 10 ಮಲೇರಿಯಾ ಪ್ರಕರಣ ವರದಿಯಾಗಿವೆ.
–ಡಾ.ಶಿವಸ್ವಾಮಿ ಜಿಲ್ಲಾ ಆರೋಗ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT