ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ಮಟ್ಟದ ಚೆಸ್ ಟೂರ್ನಿ ಆ. 2ರಿಂದ

Published 25 ಜುಲೈ 2024, 14:18 IST
Last Updated 25 ಜುಲೈ 2024, 14:18 IST
ಅಕ್ಷರ ಗಾತ್ರ

ಹಾಸನ: ‘ಜಿಲ್ಲಾ ಚೆಸ್ ಅಸೋಸಿಯೇಷನ್, ಕದಂಬ ಚೆಸ್ ಅಕಾಡೆಮಿ, ಪಶು ವೈದ್ಯಕೀಯ ಕಾಲೇಜು ಹಾಗೂ ಎನ್.ಟಿ.ಆರ್. ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಆ. 2ರಿಂದ 4ರವರೆಗೆ ರಾಜ್ಯ ಮಟ್ಟದ ಫಿಡೆ ರೇಟೆಡ್ ಚೆಸ್ ಟೂರ್ನಿಯನ್ನು ಏರ್ಪಡಿಸಲಾಗಿದೆ’ ಎಂದು ಅಸೋಸಿಯೇಷನ್ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಟಿ. ತ್ಯಾಗರಾಜ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಪಶುವೈದ್ಯಕೀಯ ಕಾಲೇಜಿನ ಆವರಣದಲ್ಲಿ 19 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಚೆಸ್ ಟೂರ್ನಿ ಆಯೋಜಿಸಲಾಗಿದ್ದು  ಸುಮಾರು 300 ಆಟಗಾರರು ಭಾಗವಹಿಸಲಿದ್ದಾರೆ’ ಎಂದರು.

‘ಈ ಚೆಸ್ ಟೂರ್ನಿಯಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರತ್ಯೇಕವಾಗಿ 9 ಸುತ್ತುಗಳಿದ್ದು, ಅದರಲ್ಲಿ ಮೊದಲ ಮೊದಲ 4 ಸ್ಥಾನ ಪಡೆದು ವಿಜೇತರಾದ ಸ್ಪರ್ಧಿಗಳು ಹರಿಯಾಣದಲ್ಲಿ ಸೆ. 20 ರಿಂದ 28 ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ’ ಎಂದರು.

‘ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು ₹ 900 ಪ್ರವೇಶ ಶುಲ್ಕವನ್ನು ನಿಗದಿ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಚೆಸ್ ಪಂದ್ಯಾವಳಿಯಲ್ಲಿ ಆಡಿದ ಅಭ್ಯರ್ಥಿಗಳಿಗೆ 1500 ಪ್ರವೇಶ ಶುಲ್ಕವನ್ನು ನಿಗದಿ ಮಾಡಲಾಗಿದೆ. ಜೂನ್ 2ರಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ 120 ಮಂದಿ ಭಾಗವಹಿಸಿದ್ದರು. ಇದರಲ್ಲಿ ಗೆಲುವು ಸಾಧಿಸಿದವರನ್ನು ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆ ಮಾಡಲಾಗಿದೆ’ ಎಂದು ವಿವರಿಸಿದರು.

‘ಈ ಅವಕಾಶವನ್ನು ಜಿಲ್ಲೆಯ ಪ್ರತಿಯೊಬ್ಬ ಚೆಸ್ ಆಟಗಾರರು ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಕದಂಬ ಚೆಸ್ ಅಕಾಡೆಮಿಯ ಅಧ್ಯಕ್ಷೆ ರತ್ನಾ ಕಿರಣ್, ಉಪಾಧ್ಯಕ್ಷ ಮಂಜುನಾಥ್ ಪ್ರಸಾದ್, ಸಹ ಕಾರ್ಯದರ್ಶಿ ರಾಧಾ ಜಗದೀಶ್, ಕಾವ್ಯ ಚಂದನ್, ನಯನ ಸತೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT