ಹಾಸನ: ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯರಾತ್ರಿ ತನ್ನ ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ್ದಾನೆ.

ಮನೆಯೊಳಗಿದ್ದ ಪತ್ನಿ, ಇಬ್ಬರು ಗಂಡು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಾದ ಗೀತಾ, ಚಿರಂತನ್, ನಂದನ್ ಅವರನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ರಂಗಸ್ವಾಮಿ ಮನೆಗೆ ಬೆಂಕಿ ಹಚ್ಚಿದ ಆರೋಪಿ. ಜಮೀನು ವಿಚಾರಕ್ಕೆ ಮತ್ತು ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ರಂಗಸ್ವಾಮಿ ವಿರುದ್ಧ ಈ ಹಿಂದೆ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಲ್ಕು ತಿಂಗಳಿನಿಂದ ಪತಿ ಹಾಗೂ ಪತ್ನಿ, ಮಕ್ಕಳು ಪ್ರತ್ಯೇಕವಾಗಿದ್ದರು.

ರಂಗಸ್ವಾಮಿ ಆಗಾಗ್ಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದ. ಆದರೆ ಶುಕ್ರವಾರ ಮಕ್ಕಳನ್ನು ನೋಡಲು ಬಂದಾಗ, ಪತ್ನಿ ಗೀತಾ ಬಿಡಲಿಲ್ಲ. ಇದರಿಂದ ಕೋಪಗೊಂಡ ರಂಗಸ್ವಾಮಿ, ಪೆಟ್ರೋಲ್ ಬಂಕ್ನಿಂದ ಪೆಟ್ರೋಲ್ ತಂದು ಮಧ್ಯರಾತ್ರಿ ಮನೆಗೆ ಸುರಿದು ಬೆಂಕಿ ಹಚ್ಚಿದ್ದಾನೆ.

ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ, ಸ್ಥಳೀಯರ ನೆರವಿನಿಂದ ಗೀತಾ ಹಾಗೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳು ಸುಟ್ಟಿವೆ. ಆರೋಪಿ ರಂಗಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.