ಹಾಸನ: ‘ಹಿಂದೂಗಳಲ್ಲದವರಿಗೆ ದೇವಸ್ಥಾನ ಮತ್ತು ಜಾತ್ರೆಗಳಲ್ಲಿ ವ್ಯಾಪಾರ ನಿರ್ಬಂಧ ಕಾನೂನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ರೂಪುಗೊಂಡಿದ್ದು, ಅದರಂತೆಯೇ ಎಲ್ಲಾ ಕಡೆ ನಡೆಯಲಿ ಎಂದು ಈಗ ಜನ ಮನವಿ ಕೊಡುತ್ತಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಶ್ರವಣಬೆಳಗೊಳದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೇಲೂರು ಚನ್ನಕೇಶವ ರಥೋತ್ಸವ ಸಂದರ್ಭದಲ್ಲಿ ಹಿಂದೂಗಳಲ್ಲದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಬಜರಂಗದಳ ಕಾರ್ಯಕರ್ತರ ಮನವಿ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿ, ಜಿಲ್ಲಾಧಿಕಾರಿ ಚರ್ಚಿಸಿ ಕ್ರಮ ಕೈಗೊಳ್ಳುತ್ತಾರೆ’ ಎಂದರು.

‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಹಳಷ್ಟು ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಯಾರ ಮನಸ್ಸಿಗೂ ನೋವಾಗದ ರೀತಿ ನಡೆದುಕೊಳ್ಳಬೇಕು. ಹಿಜಾಬ್ ಕುರಿತು ಈಗಾಗಲೇ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಗೌರವಿಸಿ ಸಂವಿಧಾನಕ್ಕೆ ಬದ್ಧರಾಗಿರಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.