ಹಾಸನ: ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು. ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು. ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಕಾಲ ಧರಣಿ ನಡೆಸಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ಮುಖಂಡರು, ರಾಜ್ಯ ಸರ್ಕಾರ ಅನ್ನದಾತರ ತಲೆ ಮೇಲೆ ಚಪ್ಪಡಿ ಕಲ್ಲು ಎಳೆದಿದೆ. ಸಚಿವ ಜಮೀರ್ ರೈತರ ಜಮೀನು ಕಬಳಿಕೆಗೆ ಮುಂದಾಗಿದ್ದಾರೆ. ರೈತರ ಜಮೀನು ಕಬಳಿಸಲು ಹುನ್ನಾರ ನಡೆದಿದೆ ಎಂದು ಆರೋಪಿಸಿದೆ.

ದಶಕಗಳ ಹಿಂದೆ ಕಾಂಗ್ರೆಸ್ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಇದು ರದ್ದಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಪ್ರಕ್ರಿಯೆ ಸ್ಥಗಿತ ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಸರ್ಕಾರ ನೂರಾರು ರೈತರಿಗೆ ನೋಟಿಸ್ ಕೊಟ್ಟಿದೆ. ರೈತರ ಭೂಮಿ, ಶಾಲೆ, ದೇವಸ್ಥಾನ, ಮಠಗಳನ್ನು ವಕ್ಫ್ ಜಾಗ ಎಂದು ಮಾಡಿದ್ದಾರೆ. ಇದು ಹಿಂದೂ ವಿರೋಧಿ ಸರ್ಕಾರ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದು ದೂರಿದರು.

ಇವು ಕೆಲವು ಉದಾಹರಣೆಗಳಷ್ಟೇ. ವಕ್ಫ್ ಬೋರ್ಡ್ನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿ ಸಾಮರಸ್ಯ ಹದಗೆಡುವಂತೆ ಮಾಡಿವೆ. ಸರ್ಕಾರ ವಿವೇಚನೆ ಇಲ್ಲದೇ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದು, ರಾಜ್ಯದ ಅನೇಕ ರೈತರ ಆಸ್ತಿ ವ್ಯಾಜ್ಯ ಬೀದಿಗೆ ಬರುತ್ತಿದೆ ಎಂದು ಆರೋಪಿಸಿದರು.

ಇದೇ ರೀತಿ ನಿಲುವುಗಳನ್ನು ರಾಜ್ಯ ಸರ್ಕಾರ ಮುಂದುವರಿಸಿದಲ್ಲಿ, ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಆಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯದ, ರೈತರ ಹಿತಕ್ಕೆ ಧಕ್ಕೆ ಆಗುವ, ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲಿಂ ಓಲೈಕೆ ಮಾಡುವ ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ಸಹಿಸುವುದಿಲ್ಲ. ಕೂಡಲೇ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡಿದಂತೆ ತಾತ್ಕಾಲಿಕವಾಗಿ ತಡೆಹಿಡಿದಿರುವುದು ಕೇವಲ ಚುನಾವಣಾ ತಂತ್ರಗಾರಿಕೆ. ಬಿಜೆಪಿಯು ಈ ತಂತ್ರಗಾರಿಕೆಯನ್ನು ಒಪ್ಪುವುದಿಲ್ಲ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿ ಪರಿಣಮಿಸಲಿದೆ. ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಇದೆ ರೀತಿ ಜನ ವಿರೋಧಿ ಆಡಳಿತ ಮುಂದುವರಿಸಿದಲ್ಲಿ ಇಡೀ ರಾಜ್ಯದ ಜನತೆಯನ್ನು ಒಗ್ಗೂಡಿಸಿ, ಬಿಜೆಪಿ ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಮಾಜಿ ಅಧ್ಯಕ್ಷ ನವಿಲೇ ಅಣ್ಣಪ್ಪ, ನಗರಸಭೆ ಮಾಜಿ ಅಧ್ಯಕ್ಷ ಆರ್. ಮೋಹನ್, ಪಕ್ಷದ ಮುಖಂಡರಾದ ಪ್ರಸನ್ನ ಕುಮಾರ್, ಅಮಿತ್ ಶೆಟ್ಟಿ, ಬಾಬು, ಎಸ್.ಡಿ. ಚಂದ್ರು, ಶೋಭನ್ ಬಾಬು, ಎನ್.ಆರ್. ಗಿರೀಶ್, ಮಂಜು, ಯೋಗೀಶ್, ಮಹಿಳಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಬಾಣಾವರ ಜಯಣ್ಣ, ರಾಜಕುಮಾರ್, ಶ್ರೀಪತಿ ಅಯ್ಯಂಗಾರ್, ಗಂಗಾಧರ್, ಪುನೀತ್, ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.