ಹಾಸನ: ‘ರಾಜ್ಯ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದು, ನನ್ನ ಹೋರಾಟದಲ್ಲಿ ಮಾಜಿ ಸಚಿವ ಎ. ಮಂಜು ಅವರ ಪಾತ್ರ ಇಲ್ಲ’ ಎಂದು ಬಿಜೆಪಿ ಮುಖಂಡ, ದೂರುದಾರ ವಕೀಲ ಜಿ.ದೇವರಾಜೇಗೌಡ ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಹೋರಾಟವನ್ನು ಏಕಾಂಗಿಯಾಗಿ ಮಾಡಿದ್ದು, ಇದರಲ್ಲಿ ಯಾರ ಸಹಕಾರವನ್ನೂ ಪಡೆದಿಲ್ಲ. ಎ. ಮಂಜು ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಕೋರ್ಟ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು’ ಎಂದರು.

‘ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ನಾಮಪತ್ರದಲ್ಲಿ ದೋಷವಿರುವ ಬಗ್ಗೆ ಪೂರಕವಾಗಿ ದಾಖಲೆಗಳನ್ನು ಒದಗಿಸಿ, ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ಸುದೀರ್ಘ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಿಲ್ಲೆಯ ಜನತೆಗೆ ಹಾಗೂ ಸತ್ಯಕ್ಕೆ ಸಂದ ಜಯವಾಗಿದೆ’ ಎಂದು ಬಣ್ಣಿಸಿದರು.

‘ರಾಜ್ಯ ಹೈಕೋರ್ಟ್ ನೀಡಿರುವ ಈ ತೀರ್ಪಿನಿಂದ ಕಾನೂನಿಗೆ ಎಲ್ಲರೂ ಒಂದೇ ಎಂದು ಋಜುವಾತು ಆಗಿದ್ದು, ರಾಜ್ಯದ ಜನತೆಗೆ ಸಂದೇಶ ತಿಳಿದಂತಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದು, ಅಲ್ಲಿಯೂ ನನಗೆ ಪೂರಕವಾದ ತೀರ್ಪು ಹೊರಬೀಳಲಿದೆ ಎಂಬ ವಿಶ್ವಾಸವಿದೆ’ ಎಂದರು.

‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಬಯಸಿದರೆ ಸ್ಪರ್ಧೆ ಮಾಡಲು ಸಿದ್ಧನಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಒಂದು ಲಕ್ಷ ಮತಗಳಿಂದ ಗೆಲುವು ಸಾಧಿಸುವುದು ಶತಸಿದ್ಧ’ ಎಂದು ಭವಿಷ್ಯ ನುಡಿದರು. ದೇವಾನಂದ, ಲತೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.