ಅರಸೀಕೆರೆ: ಎತ್ತಿನಹೊಳೆ ನೀರಾವರಿ ಯೋಜನೆಗೆ ಸಂಬಂಧಿಸಿ ಕೃಷಿ ಜಮೀನು ಕಳೆದುಕೊಂಡು, ಪರಿಹಾವೂ ಸಿಗದೆ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸರ್ಕಾರದಿಂದ ಬರಬೇಕಾದ ಪರಿಹಾರ, ಪುನರ್ವಸತಿಯನ್ನು ಕೂಡಲೇ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಪಟೇಲ್ ಶಿವಪ್ಪ ಮನವಿ ಸಲ್ಲಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿತ್ತು. ಈ ಯೋಜನೆಯ ಸಾಧಕ ಬಾಧಕಗಳ ಸಂಪೂರ್ಣ ಅರಿವು ಇರುವುದರಿಂದ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಎತ್ತಿನಹೊಳೆ ಯೋಜನೆಯಡಿ ಭೂ ಸಂತ್ರಸ್ತರಿಗೆ ಅಗತ್ಯವಾಗಿ ಬರಬೇಕಿರುವ ಪರಿಹಾರ ಬಿಡುಗಡೆಗೆ ಬಿಜೆಪಿ ಸರ್ಕಾರ ಮೌನ ವಹಿಸಿದೆ. ಭೂ ಸ್ವಾಧೀನ ಪರಿಹಾರ ಹಣ ಹಾಗೂ ಪುನರ್ವಸತಿ ಸೌಲಭ್ಯಗಳನ್ನು ಕಲ್ಪಿಸಲು ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ಎಸ್ಐಎ ರಚಿಸಲಾಗಿತ್ತು. ಅಧಿಕಾರಿಗಳು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಅನುಮೋದನೆಯೂ ದೊರೆತಿದೆ ಎಂದರು.

ಈ ವರದಿ ಅನ್ವಯ ತಾಲ್ಲೂಕಿನಲ್ಲಿ ಎತ್ತಿನಹೊಳೆ ನೀರಾವರಿ ಯೋಜನೆಗೆ ಸುಮಾರು 1047 ಎಕರೆ ಪ್ರದೇಶದಷ್ಟು ಕೃಷಿ ಭೂಮಿ ಭೂ ಸ್ವಾಧೀನಕ್ಕೊಳಪಟ್ಟಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಗತಿಯಲ್ಲಿದ್ದರೂ ಪರಿಹಾರ, ಪುನರ್ವಸತಿ ದೊರೆತಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದೆವು ಎಂದು ಅವರು ತಿಳಿಸಿದರು.

ಹೊಳೆನರಸೀಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊನ್ನಿಕೊಪ್ಪಲು ಮಂಜಣ್ಣ, ಅರಸೀಕೆರೆ ಕಾಂಗ್ರೆಸ್ ಮುಖಂಡ ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಸಯ್ಯದ್ ಥೋಪಿಕ್, ಬೇಲೂರು ರಂಗನಾಥ್ ನಿಯೋಗದಲ್ಲಿದ್ದರು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.