ಹಾವೇರಿ: ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ದ್ವಾರಕೀಶ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಹಾಗೂ ನಾಡಿಗೆ ದೊಡ್ಡ ನಷ್ಟ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವಾರಕೀಶ್ ಅವರು ಸಿನಿಮಾ ರಂಗದಲ್ಲಿ ಹೊಸತನ ತಂದವರು. ಕಲೆಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ತಮ್ಮ ಬದುಕಿನಲ್ಲಿ ಏನೇ ಕಷ್ಟ ಇದ್ದರೂ ಜನರನ್ನು ನಗಿಸುವ ಕೆಲಸ ಮಾಡಿದ್ದಾರೆ ಎಂದರು.

ಸಿನಿಮಾ ರಂಗದಲ್ಲಿ ಯಶಸ್ಸು ಸೋಲು ಕಂಡರೂ ಸಿನಿಮಾ ರಂಗವನ್ನು ಎಂದೂ ಬಿಡಲಿಲ್ಲ. ದ್ವಾರಕೀಶ್ ಅವರು ಅಗಲಿರುವುದು ಕನ್ನಡ ಚಿತ್ರರಂಗ ಹಾಗೂ ಕನ್ನಡ ನಾಡಿಗೆ ದೊಡ್ಡ ಹಿನ್ನಡೆಯಾಗಿದೆ. ವೈಯಕ್ತಿಕವಾಗಿ ನನಗೆ ಬಹಳ ದುಖವಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ, ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.