ಸೋಮವಾರ, 8 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಟ್ಟೀಹಳ್ಳಿ | ಶಾಲಾ ಆವರಣದಲ್ಲಿ ರಕ್ತದ ಕಲೆಗಳು: ಪೊಲೀಸರಿಂದ ತನಿಖೆ

ಆತಂಕಗೊಂಡ ಶಿಕ್ಷಕರು, ವಿದ್ಯಾರ್ಥಿಗಳು : ಪೊಲೀಸರಿಂದ ತನಿಖೆ
Published 5 ಜುಲೈ 2024, 15:23 IST
Last Updated 5 ಜುಲೈ 2024, 15:23 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ತಾಲ್ಲೂಕಿನ ಹಿರೇಯಡಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಾಗೂ ಆಟದ ಮೈದಾನದಲ್ಲಿ ಶುಕ್ರವಾರ ರಕ್ತದ ಕಲೆಗಳು ಗೋಚರಿಸಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಆತಂಕಗೊಂಡರು.

ಎಂದಿನಂತೆ ಶುಕ್ರವಾರ ಬೆಳಿಗ್ಗೆ ಶಾಲೆಗೆ ಆಗಮಿಸಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣ ಹಾಗೂ ಆಟದ ಮೈದಾನದಲ್ಲಿನ ರಕ್ತದ ಗುರುತುಗಳನ್ನು ನೋಡಿದರು. ಕೂಡಲೇ ಶಿಕ್ಷಣಾಧಿಕಾರಿಗಳ ಗಮನಕ್ಕೆ ವಿಷಯ ತಿಳಿಸಲಾಗಿ ಅವರ ಸೂಚನೆಯಂತೆ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಿದರು.

ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಆಗಮಿಸಿ ರಕ್ತದ ಕಲೆಗಳನ್ನು ಅವಲೋಕಿಸಿದರು. ಹಾವೇರಿಯಿಂದ ಶ‍್ವಾನದಳ ಆಗಮಿಸಿದ್ದರೂ ನಿರಂತರ ಮಳೆಯಿಂದಾಗಿ ಸ್ಪಷ್ಟತೆ ಸಿಗಲಿಲ್ಲದಾಯಿತು. ರಕ್ತದ ಮಾದರಿ ಸಂಗ್ರಹಿಸಿ ಎಫ್.ಎಸ್.ಎಲ್. ಗೆ ಹೆಚ್ಚಿನ ತನಿಖೆಗೆ ಕಳಿಸಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಸ್ಥಳದಲ್ಲಿದ್ದು, ಎಂದಿನಂತೆ ಶಾಲಾ ತರಗತಿಗಳು, ಮಧ್ಯಾಹ್ನದ ಬಿಸಿಯೂಟ ನಡೆಯಿತು.

ರಟ್ಟೀಹಳ‍್ಳಿ ತಾಲ್ಲೂಕಿನ ಹಿರೇಯಡಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ರಕ್ತದ ಕಲೆಗಳು ಕಂಡುಬಂದಿದ್ದರಿಂದ ಇಲಾಖೆ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು 
ರಟ್ಟೀಹಳ‍್ಳಿ ತಾಲ್ಲೂಕಿನ ಹಿರೇಯಡಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ರಕ್ತದ ಕಲೆಗಳು ಕಂಡುಬಂದಿದ್ದರಿಂದ ಇಲಾಖೆ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT