ಹಾವೇರಿ: ನಿರಂತರ ಮಳೆಯಿಂದಾಗಿ ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಲ್ಲಲ್ಲಿ ನೀರು ನಿಂತುಕೊಂಡು ಕೇಸರಾಗಿದ್ದು, ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ (ಎಪಿಸಿ) ಹುದ್ದೆಗಳ ದೈಹಿಕ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಎಸ್ಪಿ ಅಂಶುಕುಮಾರ್, ‘ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ 60 ಎಪಿಸಿ ಹುದ್ದೆಗಳ ಭರ್ತಿಗೆ ಜುಲೈ 8ರಂದು 300 ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಸಬೇಕಿತ್ತು. ಮಳೆಯಿಂದಾಗಿ ಕ್ರೀಡಾಂಗಣ ಕೇಸರಾಗಿದೆ. ಇದರಿಂದ ಪರೀಕ್ಷೆಗೆ ಅಡ್ಡಿ ಉಂಟಾಗಲಿದೆ. ಆದ್ದರಿಂದ ದೈಹಿಕ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.