ಹಾವೇರಿ: ತಾಲ್ಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ವಿದ್ಯಾರ್ಥಿಗಳ ಬಸ್ ಪಾಸ್ ಅನ್ನು ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ ಹಾಗೂ ಗ್ರಾಮೀಣ ಭಾಗದ ಬಸ್ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಗಾಂಧಿಪುರ ಕಾಲೇಜು ಎದುರು ಪ್ರತಿಭಟನೆ ನಡೆಯಿತು.

ನಗರದ ಆರ್‌ಟಿಒ ಕಚೇರಿ ಹತ್ತಿರ ಇರುವ ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ವಿ. ಜಗದೀಶ ಅವರಿಗೆ ಮನವಿ ಸಲ್ಲಿಸಲಾಯಿತು.

ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ‘ಹಾವೇರಿ ಜಿಲ್ಲಾ ಕೇಂದ್ರದಿಂದ ದೂರವಿರುವ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉನ್ನತ ಅಭ್ಯಾಸಕ್ಕಾಗಿ ಗ್ರಾಮೀಣ ಭಾಗದ 2890 ಜನ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ.2021-22ಸಾಲಿನವರೆಗೂ ವಿದ್ಯಾರ್ಥಿಯ ತನ್ನ ಹಳ್ಳಿಯಿಂದ ಹಾವೇರಿವರೆಗೆ ಮಾರ್ಗ ಬದಲಾವಣೆ ಕಾಲೇಜಿನ ಹೆಸರು ಹಾಕಿ ಬಸ್ ಪಾಸ್ ವಿತರಣೆ ಮಾಡುವ ಪದ್ದತಿ ಇತ್ತು. ಆದರೆ, ಈ ವರ್ಷದಿಂದ ಹಳ್ಳಿಯಿಂದ ಕಾಲೇಜಿನವರೆಗೆ ಮಾತ್ರ ಬಸ್ ಪಾಸ್ ವಿತರಣೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು.

ಕಂಪ್ಯೂಟರ್ ಸೆಂಟರ್, ಹಾಸ್ಟೆಲ್, ಸ್ಕಾಲರ್‌ಶಿಪ್, ಪುಸ್ತಕ ಖರೀದಿ, ಟ್ಯೂಷನ್ ಕ್ಲಾಸ್, ಕಂಪ್ಯೂಟರ್ ಕ್ಲಾಸ್ ಸೇರಿದಂತೆ ಹಲವಾರುಹ ಕೆಲಸಗಳಿಗೆ ಹಾವೇರಿ ನಗರಕ್ಕೆ ಹೋಗುವ ಅನಿವಾರ್ಯತೆ ವಿದ್ಯಾರ್ಥಿಗಳಿಗಿರುತ್ತದೆ. ಆದ್ದರಿಂದ ಅವೈಜ್ಞಾನಿಕ ಈ ನೀತಿಯನ್ನು ಹಿಂಪಡೆದು ಹಾವೇರಿ ನಗರದವರೆಗೂ ಬಸ್ ಪಾಸ್ ವಿತರಣೆ ಮಾಡಬೇಕು ಒಂದು ವೇಳೆ ಈ ಬೇಡಿಕೆ ಈಡೇರಿಸದಿದ್ದರೆ ಕೆಎಸ್ಆರ್ಟಿಸಿ ಡಿಪೋ ಮುತ್ತಿಗೆ ಹಾಕಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನವಿ ಪತ್ರ ಸ್ವೀಕರಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ವಿ. ಜಗದೀಶ ಮಾತನಾಡಿ, ನಮ್ಮ ಹಂತದಲ್ಲಿ ಬದಲಾವಣೆ ಮಾಡುವುದಕ್ಕೆ ಬರುವುದಿಲ್ಲ. ನೀವು ನೀಡಿದ ಮನವಿಯನ್ನು ಮೇಲಧಿಕಾರಿಗಳಿಗೆ ಪತ್ರ ಬರೆದು ಬದಲಾವಣೆಗೆ ಅವಕಾಶ ಸಿಕ್ಕರೆ ಖಂಡಿತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲಾಗುವುದು ಎಂದರು.

ಎಸ್ಎಫ್ಐ ಜಿಲ್ಲಾ ಮುಖಂಡರಾದ ಗುಡ್ಡಪ್ಪ ಮಡಿವಾಳರ, ವಿದ್ಯಾರ್ಥಿ ಮುಖಂಡ ವಿವೇಕ್ ಫನಾಸೆ, ರಂಜಿತಾ, ಯುವರಾಜ ಹಂಚಿನಮನಿ, ಅರುಣ್ ಆರೇರ್, ಶ್ರೇಯಸ್ ಕೊರವರ, ಸುದೀಪ್ ಭಜಂತ್ರಿ, ಪಲ್ವೆಜ್ ಖಾನ್, ಕೇಶವ್ ಬಡಿಗೇರ್, ಅಭಿಷೇಕ್ ಎಂ, ಕಿರಣ್ ಹಿರೇಮಠ, ರಂಜಿತ್ ಎಚ್, ಶ್ರುತಿ ಕಳಸದ, ತೇಜು ಬ್ಯಾಡಗಿ, ಅಕ್ಷತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.