ಆಸ್ಪತ್ರೆಯ ಆವರಣದಲ್ಲಿ ಕಸ ಕಡ್ಡಿ ತ್ಯಾಜ್ಯ ಎಲ್ಲೆಂದರಲ್ಲಿ ಗೋಚರಿಸುತ್ತಿದೆ. ಶೌಚಾಲಯಗಳಲ್ಲಿ ಸ್ವಚ್ಛತೆ ಇರುವುದಿಲ್ಲ. ಆಸ್ಪತ್ರೆಯ ಸುತ್ತಲೂ ಕಾಂಪೌಂಡ್ ಗೋಡೆ ಇಲ್ಲ. ವೈದ್ಯರು ಹಾಗೂ ಸಿಬ್ಬಂದಿ ಬೇರೆ ಬೇರೆ ಕಡೆ ನೆಲೆಸಿದ್ದಾರೆ. ತುರ್ತು ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುವುದು ವಿಳಂಬವಾಗುತ್ತಿದೆ.
ಶಿವಕುಮಾರ ಉಪ್ಪಾರ, ರಟ್ಟೀಹಳ್ಳಿ
ಪ್ರಸ್ತುತ ದಿನಗಳಲ್ಲಿ ಡೆಂಗಿ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಅಗತ್ಯ ಔಷಧಿ ಸಂಗ್ರಹವಿದೆ. ಲಭ್ಯವಿರುವ ಸೌಕರ್ಯ ಹಾಗೂ ವೈದ್ಯರನ್ನು ಬಳಸಿಕೊಂಡು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಡಾ. ಲೋಕೇಶಕುಮಾರ, ಆಡಳಿತ ವೈದ್ಯಾಧಿಕಾರಿ
ರಟ್ಟೀಹಳ್ಳಿಯ ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆಂದು ಸರದಿಯಲ್ಲಿ ನಿಂತಿರುವ ಜನರು