ಪಶು ವೈದ್ಯರ ಕೊರತೆಯಿಂದ ಚರ್ಮಗಂಟು ಕಾಯಿಲೆಗೆ ಜಿಲ್ಲೆಯಲ್ಲಿ 2000ಕ್ಕೂ ಹೆಚ್ಚು ಜಾನುವಾರಗಳು ಮೃತಪಟ್ಟಿವೆ. ಆದರೂ ಸರ್ಕಾರ ಪಶು ವೈದ್ಯರನ್ನು ನೇಮಕ ಮಾಡುತ್ತಿಲ್ಲ. ಹೀಗೆ ಮುಂದುವರಿದರೆ ತಾಲ್ಲೂಕು ಕಚೇರಿ ಹಾಗೂ ಜಿಲ್ಲಾ ಪಶು ಸಂಗೋಪನಾ ಇಲಾಖೆಗೆ ಬೀಗ ಹಾಕಿ ಸರ್ಕಾರದ ಗಮನ ಸೆಳೆಯಲಾಗುವುದು.
ರಾಮಣ್ಣ ಕೆಂಚಳ್ಳೇರ, ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ
ರೈತರಿಗೆ ತೊಂದರೆ ಆಗದಂತೆ ಲಭ್ಯವಿರುವ ಸಿಬ್ಬಂದಿಗಳೇ ಆಸ್ಪತ್ರೆಗೆ ಬರುವ ಜಾನುವಾರಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದೇವೆ. ಸರ್ಕಾರದ ಯಾವುದೇ ಕಾರ್ಯಕ್ರಮಗಳಿಗೆ ತೊಂದರೆ ಆಗಿಲ್ಲ. ಸರ್ಕಾರಕ್ಕೆ ಸಿಬ್ಬಂದಿಗಳ ಕೊರತೆ ಬಗ್ಗೆ ಮಾಹಿತಿ ನೀಡಿದ್ದೇವೆ.
ಡಾ.ಕಿರಣ್ ಎಲ್. , ಸಹಾಯಕ ನಿರ್ದೇಶಕ ಪಶುಪಾಲನಾ ಇಲಾಖೆಮ ಹಿರೇಕೆರೂರು
ಯೋಜನೆಯನ್ನು ಕಾರ್ಯ ನಿರ್ವಹಿಸಲು ಖಾಸಗಿ ಕಂಪನಿಗೆ ಟೆಂಡರ್ ಕೊಡಲಾಗಿದೆ. ಇದುವರೆಗೂ ಆ ಕಂಪನಿ ಕಾರ್ಯನಿರ್ವಹಿಸದೇ ಇರುವುದರಿಂದ ಈ ಯೋಜನೆಯ ಲಾಭ ರೈತರಿಗೆ ಸಿಗುತ್ತಿಲ್ಲ
ಮಾಲತೇಶ ಪೂಜಾರ, ರೈತ ಮುಖಂಡ
ಹಾವೇರಿ ನಗರದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಹಸುವನ್ನು ಪರೀಕ್ಷೆ ಮಾಡುತ್ತಿರುವ ದೃಶ್ಯ (ಸಂಗ್ರಹ ಚಿತ್ರ)