ಶಿಗ್ಗಾವಿ: ರಾಣೆಬೆನ್ನೂರಿನ ಬಿಜೆಪಿ ಶಾಸಕ ಅರುಣಕುಮಾರ ಪೂಜಾರ ಅವರ ಪತ್ನಿ ಮಂಗಳಗೌರಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಸುಮಾರು 15 ನಿಮಿಷ ಮಾತನಾಡಿದ್ದು ಚರ್ಚೆಗೆ ಗ್ರಾಸವಾಯಿತು.

ಪಟ್ಟಣದ ಹನುಮಂತಗೌಡ್ರ ಪಾಟೀಲ ಕಲ್ಯಾಣಮಂಟಪದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ವೇದಿಕೆಗೆ ಬಂದುಬೊಮ್ಮಾಯಿಯವರ ಕುರ್ಚಿಯ ಹಿಂಭಾಗ ನಿಂತು ಅವರ ಕಿವಿ ಹತ್ತಿರ ಮಾತನಾಡಿದರು.

10ಕ್ಕೂ ಹೆಚ್ಚು ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ಮಾಹಿತಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ವೇದಿಕೆಗೆ ಬಂದ ಮಂಗಳಗೌರಿ ಅವರು ತಮ್ಮ ಪತಿಗೆ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದ ದೃಶ್ಯ ಗಮನ ಸೆಳೆಯಿತು.

ಶಿಗ್ಗಾವಿಯ ವಿವಿಧ ಕಾರ್ಯಕ್ರಮದಲ್ಲಿ ಸಿಎಂ ಹಿಂದೆ ಸುತ್ತಾಡಿದ ಮಂಗಳಾಗೌರಿ ಅವರು ಪತಿಯ ಪರ ಲಾಬಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.