ಹಾವೇರಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಹಗುರವಾದ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎನಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿರುಗೇಟು ನೀಡಿದರು.

ಹಾನಗಲ್ ತಾಲ್ಲೂಕಿನ ಗೆಜ್ಜೆಹಳ್ಳಿಯಲ್ಲಿ ಅವರು ಮಾತನಾಡಿ, ‘ರಾಹುಲ್ ಗಾಂಧಿಯವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ನರೇಂದ್ರ ಮೋದಿ ಅವರು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಅಂತ ಹೇಳಿ ‘ಸಬ್ ಕಾ ವಿನಾಶ್’ ಮಾಡಿದ್ದಾರೆ ಎಂದು ಟೀಕಿಸಿದರು.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ರಾಹುಲ್ ಗಾಂಧಿಯವರು ಈ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಇವತ್ತು ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡರು, ಶಾಸಕರು, ಮಾಜಿ ಶಾಸಕರು, ವೀಕ್ಷಕರು ಹಾಗೂ ನಿಯೋಜಿತ ಉಸ್ತುವಾರಿಗಳು ಎಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆಗಳನ್ನು ಮಾಡಿ, ಕಾಂಗ್ರೆಸ್ ಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಮಾನೆಯವರ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.