ಹಾವೇರಿ: ‘ರಾಜ್ಯದಲ್ಲಿ ಶೇಕಡ 60ರಿಂದ 70ರಷ್ಟು ಕಾರ್ಮಿಕ ಕಾರ್ಡ್ಗಳು ನಕಲಿ ಕಾರ್ಡ್ಗಳಾಗಿದ್ದು ಅವುಗಳನ್ನು ತಡೆಯಲು ಹೊಸ ಆ್ಯಪ್ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಹಿರೇಕೆರೂರು ಪಟ್ಟಣದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟು 45 ಲಕ್ಷ ಕಾರ್ಮಿಕರು ಕಾರ್ಮಿಕ ಕಾರ್ಡ್ಗಳನ್ನು ಹೊಂದಿದ್ದಾರೆ. ಕಳೆದ ವರ್ಷದಲ್ಲಿ 39 ಲಕ್ಷ ಹೊಸ ಕಾರ್ಡ್ಗಳನ್ನು ವಿತರಿಸಲಾಗಿದೆ’ ಎಂದರು.

‘ನಕಲಿ ಕಾರ್ಡ್ಗಳನ್ನು ತಡೆಗಟ್ಟಲು ಕಾರ್ಮಿಕ ಸಂಘಟನೆಗಳ ಪಾತ್ರ ಮಹತ್ವದ್ದಾಗಿದ್ದು, ಅವರು ಸಲಹೆ, ಸೂಚನೆ ಹಾಗೂ ಸಹಾಯದಿಂದ ಅವುಗಳನ್ನು ತಡೆಹಿಡಿಯಲು ಸಾಧ್ಯ. ಕಾರ್ಮಿಕ ಕಾರ್ಯನಿರ್ವಹಿಸುವ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿ ಖುದ್ದು ಭೇಟಿ ನೀಡಿ ಪರಿಶೀಲನೆ ಮಾಡಿ, ನೈಜ ಕಾರ್ಮಿಕರನ್ನು ಗುರುತಿಸಿ ಹೊಸ ಕಾರ್ಡ್ ವಿತರಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.