ಸವಣೂರು ಪಟ್ಟಣದ ಸರ್ಕಾರಿ ಆಸ್ಪತ್ರೆ ಗೋಡೆಗೆ ಹೊಂದಿಕೊಂಡಿರುವ ಸಾರ್ವಜನಿಕ ಮೂತ್ರಾಲಯದ ಸ್ಥಿತಿ
ಸವಣೂರು ಪಟ್ಟಣದಲ್ಲಿ ಮೂತ್ರ ವಿಸರ್ಜನೆಗೆ ಮೂತ್ರಾಲಯ ವ್ಯವಸ್ಥೆ ಇಲ್ಲದೇ ಇರುವುದರಿಂದ ಶಾಲಾ ಕಾಂಪೌಂಡ್ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಸಾರ್ವಜನಿಕರು
ಕಣ್ಮರೆಯಾದ ಸಂಚಾರಿ ಮೂತ್ರಾಲಯ
ಈ ಹಿಂದೇ ಅಂಚೆ ಕಚೇರಿ ಮುಂಭಾಗ ಎಸ್‌ಬಿಐ ಪೋಲಿಸ್ ಠಾಣೆ ಮುಖ್ಯ ಮಾರುಕಟ್ಟೆ ರಸ್ತೆ ಇಂದಿರಾ ಸರ್ಕಲ್ ಭರಮಲಿಂಗೇಶ್ವರ ವೃತ್ತ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಜನದಟ್ಟಣೆ ಇರುವ ಸ್ಥಳಗಳಲ್ಲಿ ಪುರುಷ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಸಂಚಾರಿ ಮೂತ್ರಾಲಯಗಳನ್ನು ಅಳವಡಿಸಲಾಗಿತ್ತು. ಆದರೆ ವರ್ಷದಿಂದೀಚೆಗೆ ಅವುಗಳು ಕಾಣೆಯಾಗಿರುವುದರಿಂದ ಸಾರ್ವಜನಿಕರು ಮೂತ್ರ ವಿಸರ್ಜನೆಗೆ ಪಡಿಪಾಟಲು ಪಡುವಂತಾಗಿದೆ. ಸವಣೂರು ಪಟ್ಟಣ 64 ಗ್ರಾಮಗಳನ್ನು ಒಳಗೊಂಡ ತಾಲ್ಲೂಕು ಕೇಂದ್ರ. ಇಲ್ಲಿಗೆ ಪ್ರತಿನಿತ್ಯ ಕೆಲಸಕ್ಕೆಂದು ಬರುವವರ ಸಂಖ್ಯೆ ಹೆಚ್ಚಿದ್ದು ಸಾರ್ವಜನಿಕರು ಮೂತ್ರ ವಿಸರ್ಜನೆಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನಜಂಗುಳಿಯಿಂದ ತುಂಬಿರುವ ಪಟ್ಟಣದ ಮಾರ್ಕೆಟ್ ರಸ್ತೆ ಅಂಚೆ ಕಚೇರಿ ರಸ್ತೆ ಪೊಲೀಸ್ ಠಾಣೆ ರಸ್ತೆ ಉಪವಿಭಾಗಾಧಿಕಾರಿಗಳ ಕಚೇರಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.
6 ಶೌಚಾಲಯಗಳ ದುರಸ್ತಿ ಹಾಗೂ 6 ಹೊಸ ಶೌಚಾಲಯ ಮತ್ತು ಮೂತ್ರಾಲಯ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ತ್ವರಿತವಾಗಿ ನಿರ್ಮಾಣ ಮಾಡಿ ಸಾರ್ವಜನಿಕರ ಉಪಯೋಗಕ್ಕೆ ಅನುಕೂಲ ಕಲ್ಪಿಸಲಾಗುವುದು
– ರೇಣುಕಾ ದೇಸಾಯಿ ಪುರಸಭೆ ಮುಖ್ಯಾಧಿಕಾರಿ ಸವಣೂರು.
ಸವಣೂರು ಪಟ್ಟಣದಲ್ಲಿ ಶೌಚಾಲಯ ಇಲ್ಲದೇ ಇರುವುದರಿಂದ ಸಾರ್ವಜನಿಕರು ಮೂತ್ರ ವಿಸರ್ಜನೆಗೆ ಪರದಾಡುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಪುರಸಭೆ ಆದ್ಯತೆಯ ಮೇರೆಗೆ ಶೌಚಾಲಯಗಳನ್ನು ನಿರ್ಮಿಸಬೇಕು. ಈಗಾಗಲೇ ಇರುವ ಮೂತ್ರಾಲಯಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು