ಹಾವೇರಿ: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು 41,998 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮೊದಲ ಸುತ್ತಿನಿಂದ ಕೊನೆಯ ಸುತ್ತಿನವರೆಗೂ (ಒಟ್ಟು 20 ಸುತ್ತು) ಮುನ್ನಡೆ ಕಾಯ್ದುಕೊಂಡ ಬಸವರಾಜ ಬೊಮ್ಮಾಯಿಯವರು 7,02,189 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ (6,60,191) ಅವರನ್ನು ಮಣಿಸಿದರು.

ಕಣದಲ್ಲಿ 14 ಅಭ್ಯರ್ಥಿಗಳಿದ್ದರೂ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯಿತು. ಅನುಭವಿ ರಾಜಕಾರಣಿ ಮತ್ತು ಯುವ ರಾಜಕಾರಣಿಯ ನಡುವಿನ ಸ್ಪರ್ಧೆಯಲ್ಲಿ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ. ಮೋದಿ ಗ್ಯಾರಂಟಿ ಮತ್ತು ಕಾಂಗ್ರೆಸ್ ಗ್ಯಾರಂಟಿ ನಡುವೆ ಭಾರಿ ಪೈಪೋಟಿ ನಡೆದು, ಅಂತಿಮವಾಗಿ ಮತದಾರರು ಕ್ಷೇತ್ರದಲ್ಲಿ ಕಮಲವನ್ನು ಅರಳಿಸಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 2009, 2014 ಮತ್ತು 2019ರಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಅವರು ‘ಹ್ಯಾಟ್ರಿಕ್ ಗೆಲುವು‘ ಸಾಧಿಸುವ ಮೂಲಕ ಕಮಲದ ಪಾಳೆಯಕ್ಕೆ ಹಾವೇರಿ ಕ್ಷೇತ್ರ ಭದ್ರಕೋಟೆ ಎನಿಸಿತ್ತು. 2024ರ ಚುನಾವಣೆಯಲ್ಲೂ ಬೊಮ್ಮಾಯಿ ಜಯ ಗಳಿಸುವ ಮೂಲಕ ಬಿಜೆಪಿಯ ಗೆಲುವಿನ ಓಟವನ್ನು ಮುಂದುವರಿಸಿದ್ದಾರೆ.

ಮೋದಿ ಅಲೆ, ಹಾವೇರಿ ಜಿಲ್ಲೆಗೆ ನೀಡಿರುವ ನೀರಾವರಿ ಯೋಜನೆಗಳು ಹಾಗೂ ಜಲಸಂಪನ್ಮೂಲ ಮತ್ತು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಣೆ ಈ ಮೂರು ಅಂಶಗಳು ಬೊಮ್ಮಾಯಿಗೆ ಗೆಲುವು ತಂದುಕೊಟ್ಟಿವೆ ಎನ್ನಲಾಗುತ್ತಿದೆ.

ರಾಜಕೀಯದಲ್ಲಿ ಅನುಭವದ ಕೊರತೆ, ಕ್ಷೇತ್ರದ ಮತದಾರರಿಗೆ ಅಪರಿಚಿತ ಮತ್ತು ಪೂರ್ಣ ಪ್ರಮಾಣದಲ್ಲಿ ಕೈಹಿಡಿಯದ ಗ್ಯಾರಂಟಿ ಯೋಜನೆಗಳು ಹಾಗೂ ಪಕ್ಷದ ಮುಖಂಡರ ಒಳೇಟು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಸೋಲಿಗೆ ಕಾರಣವಾಗಿವೆ ಎಂದು ಮತದಾರರು ವಿಶ್ಲೇಷಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.