ರಾಣೆಬೆನ್ನೂರು: ನಗರದ ಹಲಗೇರಿ ರಸ್ತೆಯ ಸರ್ಕಾರಿ ಆಸ್ಪತ್ರೆ ಎದುರುಗಡೆ ಇರುವ ಹೊರಗುಡಿ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಬೀರಲಿಂಗೇಶ್ವರ ಗಜಾನನ ಯುವಕ ಮಿತ್ರ ಮಂಡಳಿಯಿಂದ ₹25 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 31 ಅಡಿ ಎತ್ತರದ ಪರಮೇಶ್ವರ ದೇವರ ಮೂರ್ತಿಯ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು.

ಶಿವರಾತ್ರಿ ಹಬ್ಬದ ಆಚರಣೆ ದಿನ ಬಂಕಾಪುರ ಕೆಂಡದಮಠ ರೇವಣಸಿದ್ದೇಶ್ವರ ಸ್ವಾಮೀಜಿ ಅವರು ವಿಶೇಷ ಪೂಜೆ, ವಾಸ್ತುಶಾಂತಿ ಹೋಮ, ಪ್ರಾಣಪ್ರತಿಷ್ಠಾಪನೆ ಮಾಡಿ, ದರ್ಶನಕ್ಕೆ ಮುಕ್ತಗೊಳಿಸಿದರು. ಬಸಾಪುರದ ಬಸವ ಕಲಾ ಲೋಕ ಸಂಘದಿಂದ ಭಜನೆ ಕಾರ್ಯಕ್ರಮ ನೆರವೇರಿತು. ಬೀರಲಿಂಗೇಶ್ವರ ದೇವಸ್ಥಾನದ ಪದಾಧಿಕಾರಿಗಳು, ಗಜಾನನ ಯುವಕ ಮಿತ್ರ ಮಂಡಳಿ ಸದಸ್ಯರು ಹಾಗೂ ಭಕ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.