ಹಾವೇರಿ: ಇಲ್ಲಿಯ ಗುತ್ತಲ ಬಳಿಯ ಮೇವುಂಡಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಮದುವೆಯಲ್ಲಿ ಉಳಿದಿದ್ದ ಊಟವನ್ನು ಭಾನುವಾರ ತಿಂದಿದ್ದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಗುತ್ತಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇವುಂಡಿಯಲ್ಲಿ ಶನಿವಾರ ಮದುವೆ ಏರ್ಪಡಿಸಲಾಗಿತ್ತು. ಅದರಲ್ಲಿ ಉಳಿದಿದ್ದ ಊಟವನ್ನು ಹಾಸ್ಟೆಲ್ ಸೇರಿ ಹಲವು ಮಕ್ಕಳಿಗೆ ಭಾನುವಾರ ನೀಡಲಾಗಿತ್ತು.

ಊಟದ ನಂತರ ಮಕ್ಕಳು, ವಾಂತಿ-ಬೇಧಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು.

ಅದನ್ನು ಗಮನಿಸಿದ ಪೋಷಕರು, ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಏಕಾಏಕಿ ಹೆಚ್ಚು ಮಕ್ಕಳು ಬಂದಿದ್ದರಿಂದ ಆಸ್ಪತ್ರೆಯಲ್ಲಿ ಬೆಡ್ ಕೊರತೆ ಎದುರಾಗಿದೆ. ಒಂದೇ ಬೆಡ್ನಲ್ಲಿ ಇಬ್ಬರು ಮಕ್ಕಳನ್ನು ಮಲಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

'ಎಲ್ಲ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ' ಎಂದು ವೈದ್ಯರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.