ಹಾವೇರಿ: ದೇವಗಿರಿ ಗುಡ್ಡದ ಜಿಲ್ಲಾಡಳಿತ ಭವನದಲ್ಲಿ ಕೆಟ್ಟು ಹೋಗಿದ್ದ ಲಿಫ್ಟ್ ಅನ್ನು ₹3 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಿಸುವ ಜತೆಗೆ ₹12 ಲಕ್ಷ ವೆಚ್ಚದಲ್ಲಿ ಹೊಸ ಲಿಫ್ಟ್ ಅನ್ನು ಅಳವಡಿಸಲಾಗಿದೆ.

ಜಿಲ್ಲಾಡಳಿತ ಭವನದಲ್ಲಿ ಲಿಫ್ಟ್ ಸೌಲಭ್ಯವಿಲ್ಲದ ಕಾರಣ ಕಚೇರಿಗಳ ಕೆಲಸಕ್ಕೆ ಬರುತ್ತಿದ್ದ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಅಂಗವಿಕಲರಿಗೆ ತೀವ್ರ ತೊಂದರೆಯಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಸೆಪ್ಟೆಂಬರ್ 11ರಂದು ‘ಕೆಟ್ಟುನಿಂತ ಲಿಫ್ಟ್: ಅಂಗವಿಕಲರ ಪರದಾಟ’ ಎಂಬ ವಿಶೇಷ ವರದಿ ಪ್ರಕಟವಾಗಿತ್ತು.

ವರದಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು, ಸರ್ಕಾರದಿಂದ ಯಾವುದೇ ಅನುದಾನ ಬರುವುದಿಲ್ಲ. ಹಾಗಾಗಿ ಕಟ್ಟಡಗಳ ನಿರ್ವಹಣೆಯ ಅನುದಾನದಲ್ಲೇ ಸ್ವಲ್ಪ ಹಣವನ್ನು ಉಳಿತಾಯ ಮಾಡಿ ಶೀಘ್ರ ಲಿಫ್ಟ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದರು. ಅದೇ ರೀತಿ ಹೊಸ ಲಿಫ್ಟ್ ಸೌಲಭ್ಯವನ್ನು ಕಲ್ಪಿಸಿರುವುದು ಕಚೇರಿಯ ಸಿಬ್ಬಂದಿ ಮತ್ತು ಜನರಿಗೆ ಸಂತಸ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.