ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ತಾಲ್ಲೂಕು ಆಡಳಿತ ಮಾಡುವವರಿಗೆ ಸ್ಪಷ್ಟ ಪರಿಕಲ್ಪನೆ ಇಲ್ಲ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಸರ್ಕಾರಿ ಕಟ್ಟಡಗಳಿಗೆ ಕೂಡಲೇ ಸ್ವಂತ ಕಟ್ಟಡ ನಿರ್ಮಿಸಿ ಸಾರ್ವಜನಿಕರು ವಿವಿಧ ಕಡೆ ಅಲೆದಾಡುವುದನ್ನು ತಪ್ಪಿಸಬೇಕಿದೆ.– ರಾಮಣ್ಣ ಕೆಂಚಳ್ಳೇರ ಜಿಲ್ಲಾ ಘಟಕದ ಅಧ್ಯಕ್ಷ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ಎಲ್ಲಿ ಸರ್ಕಾರಿ ಜಾಗಗಳು ಲಭ್ಯವಿದೆ ಎಂಬುದನ್ನು ನೋಡಿಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಟ್ಟಡವನ್ನು ನಿರ್ಮಿಸಬೇಕಾಗಿತ್ತು. ಆದರೆ ಜನಪ್ರತಿನಿಧಿಗಳ ನಿರ್ಲಕ್ಷ್ಯ ಅಥವಾ ಅಧಿಕಾರಿಗಳ ಹೊಣೆಗೇಡಿತನದಿಂದ ಬಾಡಿಗೆ ಕಟ್ಟಡಗಳನ್ನು ಆಶ್ರಯಿಸಬೇಕಾದ ದುಃಸ್ಥಿತಿ ಎದುರಾಗಿದೆ. ಬಾಡಿಗೆ ಕಟ್ಟಡಗಳಲ್ಲಿ ಮೂಲಸೌಕರ್ಯ ಸಮಸ್ಯೆಯಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ.– ಗಿರೀಶ ಬಾರ್ಕಿ ಜಿಲ್ಲಾ ಘಟಕದ ಅಧ್ಯಕ್ಷ ಕರವೇ (ನಾರಾಯಣಗೌಡ ಬಣ)
ಪಂಚಾಯಿತಿಗಳಿಗೆ ಪತ್ರ ಹಿರೇಕೆರೂರು ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ 10 ಗುಂಟೆ ನಿವೇಶನ ಹಾಗೂ ಡಿ. ದೇವರಾಜ ಅರಸು ಭವನ ನಿರ್ಮಾಣಕ್ಕೆ 10 ಗುಂಟೆ ಜಾಗ ಅಗತ್ಯವಿದೆ. ಎರಡು ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಪಟ್ಟಣ ಪಂಚಾಯಿತಿಗೆ ಹಾಗೂ ಪಟ್ಟಣಕ್ಕೆ ಸಮೀಪದ ಗ್ರಾಮ ಪಂಚಾಯಿತಿಗಳಿಗೆ ಪತ್ರ ಬರೆಯಲಾಗಿದೆ.- ಬಿ.ಎಂ. ಪಾಟೀಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.