ಬ್ಯಾಡಗಿ: ವಿಧಾನಸೌಧದಲ್ಲಿ ಮಂಗಳವಾರ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿದ್ದಾರೆ ಎಂಬ ಆರೋಪದ ಮೇರೆಗೆ ಬ್ಯಾಡಗಿ ಪಟ್ಟಣದ ಮೆಣಸಿನಕಾಯಿ ವರ್ತಕ ಮಹ್ಮದ್ ಶಫಿ ನಾಶಿಪುಡಿ ವಿರುದ್ಧ ದೇಶದ್ರೋಹ ಪ್ರಕರಣದಡಿ ದೂರು ದಾಖಲಿಸಿ ತನಿಖೆ ನಡೆಸುವಂತೆ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಬುಧವಾರ ದೂರು ಸಲ್ಲಿಸಿದರು.

ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ‘ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದ ನಾಸೀರ್ ಹುಸೇನ್ ವಿಜಯೋತ್ಸವದ ವೇಳೆ ಪಾಲ್ಗೊಂಡಿದ್ದ ಮಹ್ಮದ್ ಶಫಿ ನಾಶಿಪುಡಿ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿದೆ. ಇಂತಹ ದೇಶದ್ರೋಹ ಹೇಳಿಕೆ ನೀಡಿದ ಅವರನ್ನು ಸ್ಥಳದಲ್ಲಿಯೇ ಪೊಲೀಸರು ಬಂಧಿಸದಿರುವುದು ದುರುದೃಷ್ಟಕರ ಸಂಗತಿ. ಮಹ್ಮದ್‌ಶಫಿ ನಾಶೀಪುಡಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅಥವಾ ಸದರಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕೆಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬಸವಣ್ಣೆಪ್ಪ ಛತ್ರದ ಮಾತನಾಡಿ, ವರ್ತಕ ಮಹಮ್ಮದ ಶಫಿಯ ವರ್ತನೆಯಿಂದ ಮಾರುಕಟ್ಟೆ ಹೆಸರಿಗೆ ಕಳಂಕ ಬಂದಿರುವುದು ಖೇದಕರ ಸಂಗತಿಯಾಗಿದೆ ಎಂದರು.

ವಕೀಲ ಎನ್.ಎಸ್. ಬಟ್ಟಲಕಟ್ಟಿ, ಸುರೇಶ ಉದ್ಯೋಗಣ್ಣವರ ದೂರು ಸಲ್ಲಿಸಿದರು. ಈ ವೇಳೆ ಬಿಜೆಪಿ ಮುಖಂಡರಾದ ಹಾಲೇಶ ಜಾಧವ, ಶಿವಯೋಗಿ ಶಿರೂರ, ಈರಣ್ಣ ಬಣಕಾರ, ಗಣೇಶ ಅಚಲಕರ, ಪ್ರಕಾಶ ಅಂಕಲಕೋಟಿ, ನಂದೀಶ ವೀರನಗೌಡ್ರ, ಸುಭಾಸ್ ಮಾಳಗಿ, ಪ್ರಶಾಂತ ಯಾದವಾಡ, ಪ್ರದೀಪ ಜಾಧವ, ಮಂಜುನಾಥ ಜಾಧವ, ಸಂಗಮೇಶ ಬೇವಿನಮಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.