ಬ್ಯಾಡಗಿ: ಪಟ್ಟಣದಲ್ಲಿ ಹಾದು ಹೋಗಿರುವ ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ ವಿಸ್ತರಣೆಗಾಗಿ ಹಳೇ ಪುರಸಭೆ ಎದುರು ಮುಖ್ಯರಸ್ತೆ ವಿಸ್ತರಣೆ ಹೋರಾಟ ಸಮಿತಿ ಸದಸ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು.

ಬುಧವಾರ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಬೆಂಬಲ ವ್ಯಕ್ತಪಡಿಸಿದ್ದರು. ಗುರುವಾರ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎಸ್.ಆರ್.ಪಾಟೀಲ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ಮುಖ್ಯರಸ್ತೆ ವಿಸ್ತರಣೆ ಅಗತ್ಯವಾಗಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ ಛಲವಾದಿ ಮಾತನಾಡಿ, ‘ಕಿರಿದಾದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿತ್ಯ ಕಿರಿಕಿರಿಯಾಗುತ್ತಿದೆ. ಅಪಘಾತದಿಂದ ಮೂರ್ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಧಿಕಾರಿಗಳು ಕೂಡಲೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ರಸ್ತೆ ವಿಸ್ತರಣೆಗೆ ಮುಂದಾಗಬೇಕು’ ಎಂದು ಒತ್ತಾಯಿಸಿದರು.

ಕಿರಣಕುಮಾರ ಎಂ.ಎಲ್., ಪಾಂಡುರಂಗ ಸುತಾರ, ದುರ್ಗೇಶ ಗೋಣೆಮ್ಮನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.