ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಟ್ಟೀಹಳ್ಳಿ: ಒಣಗಿದ ಮರಗಳ ತೆರವಿಗೆ ಆಗ್ರಹ

Published 25 ಜುಲೈ 2024, 12:41 IST
Last Updated 25 ಜುಲೈ 2024, 12:41 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ಪಟ್ಟಣ ಮಾಸೂರು ರಸ್ತೆ ಸೇರಿದಂತೆ ವಿವಿಧೆಡೆ ಬಹಳ ಹಳೆಯ ಮರಗಳಿದ್ದು, ಅವುಗಳು ಸಂಪೂರ್ಣ ಒಣಗಿ ಹೋಗಿವೆ. ಅಲ್ಲದೇ ಮರಕ್ಕೆ ಹುಳುಗಳು ಹತ್ತಿ ಬೀಳುವ ಹಂತ ತಲುಪಿದ್ದು, ಅನಾಹುತ ಸಂಭವಿಸುವ ಮೊದಲೇ ಅರಣ್ಯ ಇಲಾಖೆ ಅವುಗಳನ್ನು ಪತ್ತೆ ಹಚ್ಚಿ ತೆರವುಗೊಳಿಸುವಂತೆ ಪಟ್ಟಣದ ನಾಗರಿಕರು ಆಗ್ರಹಿಸಿದ್ದಾರೆ.

ಈ ಕುರಿತು ಬಿಜೆಪಿ ತಾಲ್ಲೂಕು ಘಟಕದ ಎಸ್.ಸಿ. ಮೋರ್ಚಾ ಅಧ್ಯಕ್ಷ ಹನುಮಂತಪ್ಪ ಗಾಜೇರ ಮಾತನಾಡಿ, ಕಳೆದ ಎರಡು ದಿನಗಳ ಹಿಂದೆ ಹಿರೇಕೆರೂರ ಪಟ್ಟಣದಲ್ಲಿ ಒಣಗಿದ ಮರ ಬಿದ್ದು, ಇಬ್ಬರು ಹೆಸ್ಕಾಂ ನೌಕರರು ಮೃತಪಟ್ಟಿದ್ದಾರೆ. ಇಂತಹ ಅನಾಹುತ ಸಂಭವಿಸುವ ಪೂರ್ವದಲ್ಲಿ ಅರಣ್ಯ ಇಲಾಖೆಯವರು ಶೀಘ್ರದಲ್ಲಿ ಒಣಗಿದ ಮರಗಳನ್ನು ಪತ್ತೆಹಚ್ಚಿ ಅವುಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

‘ಪಟ್ಟಣದ ಹೊರವಲಯದಲ್ಲಿರುವ ಒಣಗಿದ ಮರಗಳನ್ನು ಗುರುತಿಸಲಾಗಿದ್ದು, ಹಿರಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಶೀಘ್ರವೇ ಟೆಂಡರ್‌ ಕರೆದು ಅಂತಹ ಮರಗಳನ್ನು ತೆರವುಗೊಳಿಸಲಾಗುವುದು’ ಎಂದು ರಟ್ಟೀಹಳ್ಳಿ ಉಪವಲಯಅರಣ್ಯಾಧಿಕಾರಿ ಸಂತೋಷ ಆವಕ್ಕನವರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT