ಹಾವೇರಿ:ಮಹಾಮಾರಿ ಕೊರೊನಾ ನಿಯಂತ್ರಿಸುವಲ್ಲಿ ಭಾರತ ವಿಶ್ವದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಲಾಕ್‌ಡೌನ್ ಎಂದರೆ ಏನು ಎಂಬುದು ಅರ್ಥವಾಗಿಲ್ಲ. ಹಾಗಾಗಿ ಬಾಲಿಶವಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ತಿರುಗೇಟು ನೀಡಿದ್ದಾರೆ.

ವಿಷಮ ಪರಿಸ್ಥಿತಿಯಲ್ಲಿ ದೇಶದ ಜನರ ಜೀವ ಕಾಪಾಡುವುದು ಒಬ್ಬ ಜನ ನಾಯಕನಾದವನ ಆದ್ಯ ಕರ್ತವ್ಯ. ಅದರಂತೆಯೇ ಮೋದಿಯವರು ಅನೇಕ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಯಿತು. ಇದರ ಪರಿಣಾಮ ದೇಶ ಇಂದು ಸುಭದ್ರವಾಗಿದೆ. ಅದರ ಪರಿಕಲ್ಪನೆ ಇಲ್ಲದವರು ಉಡಾಫೆಯಾಗಿ ಮಾತನಾಡುತ್ತಾರೆ ಎಂದು ಟೀಕಿಸಿದ್ದಾರೆ.

ಒಣ ಪ್ರತಿಷ್ಠೆಗಾಗಿ ಮತ್ತು ಪ್ರಚಾರಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿದ್ದ ಒಂದು ಕೋಟಿ ರೂಪಾಯಿ ಚೆಕ್ ಏನಾಯಿತು ಎಂಬುದನ್ನು ರಾಜ್ಯದ ಜನತೆಗೆ ಮಾಹಿತಿ ನೀಡಲಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.