ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಮಧು ದೇವರಾಜ ಹಳೇಮನಿ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.11 ಲಕ್ಷ ದಂಡ ವಿಧಿಸಿ ಹಾವೇರಿಯ ವಿಶೇಷ ಸೆಷನ್ಸ್ ನ್ಯಾಯಾಲಯದ (ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ಆದೇಶ ನೀಡಿದ್ದಾರೆ.

ಬಾಲಕಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಹೋಗಿ, ಸಂಬಂಧಿಕರ ಮನೆಯಲ್ಲಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಹಂಸಭಾವಿ ವೃತ್ತದ ತನಿಖಾಧಿಕಾರಿ ಸಿಪಿಐ ಮಂಜುನಾಥ ಪಿ.ಎನ್. ಪಂಡಿತ ಅವರು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ದಂಡದ ಹಣದಲ್ಲಿ ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ಕರ್ನಾಟಕ ಸರ್ಕಾರವು ನೊಂದ ಬಾಲಕಿಗೆ ₹4 ಲಕ್ಷ ಪರಿಹಾರ ನೀಡಬೇಕೆಂದು ಆದೇಶ ಮಾಡಿ ತೀರ್ಪು ನೀಡಿರುತ್ತಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿಜಯಕುಮಾರ ಎಸ್. ಪಾಟೀಲ ವಾದ ಮಂಡಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.