ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಮಕ್ಕಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕಾದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಇತರೆ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರ ನಡೆಸುವ ಸ್ಥಳಗಳಲ್ಲಿ ಪಾದಯಾತ್ರೆ ಹಾಗೂ ರ್ಯಾಲಿ ಹಮ್ಮಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಧ್ವಜಗಳನ್ನು ಹಿಡಿದುಕೊಳ್ಳಲು ಹಾಗೂ ಕರಪತ್ರಗಳನ್ನು ಹಂಚಲು ಮಕ್ಕಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕಿನ ಬಹುತೇಕ ಹಳ್ಳಿಗಳಲ್ಲಿ ಅಭ್ಯರ್ಥಿಗಳು ನಿತ್ಯವೂ ಪ್ರಚಾರ ಮಾಡುತ್ತಿದ್ದಾರೆ. ತೆರೆದ ವಾಹನಗಳಲ್ಲಿ ಸುತ್ತಾಡಿ ಭಾಷಣ ಮಾಡಿ ಮತಯಾಚಿಸುತ್ತಿದ್ದಾರೆ. ಇಂಥ ಅಭ್ಯರ್ಥಿಗಳ ಜೊತೆಯಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದಾರೆ.

ಅಭ್ಯರ್ಥಿಗಳ ಚಿಹ್ನೆಯ ಟೋಪಿ ಧರಿಸುವ ಮಕ್ಕಳು, ಕೊರಳಲ್ಲಿ ಪಕ್ಷದ ಶಾಲು ಹೊತ್ತುಕೊಂಡು ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದಾರೆ. ಅವರ ಕಡೆಯಿಂದ ಅಭ್ಯರ್ಥಿಗಳ ಪರವಾಗಿ ಜೈಕಾರ ಹಾಕಿಸಲಾಗುತ್ತಿದೆ. ಈ ಎಲ್ಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ ವಿಡಿಯೊ–ಫೋಟೊಗಳು ಹರಿದಾಡುತ್ತಿವೆ.

‘ವಿಡಿಯೊ ಹಾಗೂ ಫೋಟೊ ಪುರಾವೆಗಳಿದ್ದರೂ ವಿಚಕ್ಷಣಾ ದಳದ (ಎಫ್ಎಸ್ಟಿ) ತಂಡದ ಅಧಿಕಾರಿಗಳು ಮೌನವಾಗಿದ್ದಾರೆ’ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

‘ಅಭ್ಯರ್ಥಿಗಳು ವೇಳಾಪಟ್ಟಿ ಪ್ರಕಾರ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಗ್ರಾಮಗಳಲ್ಲಿರುವ ಮುಖಂಡರು, ಜನರನ್ನು ಸೇರಿಸಿ ಅಭ್ಯರ್ಥಿಗಳನ್ನು ಸ್ವಾಗತಿಸುತ್ತಿದ್ದಾರೆ. ಪಕ್ಷಗಳ ಧ್ವಜ ಹಾಗೂ ಕರಪತ್ರಗಳನ್ನು ಹಂಚಲು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಪ್ರತ್ಯಕ್ಷದರ್ಶಿಗಳು ದೂರಿದರು.

‘ಅಭ್ಯರ್ಥಿಗಳ ಪ್ರಚಾರದ ಸಂದರ್ಭದಲ್ಲಿ ಎಫ್ಎಸ್ಟಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಹಾಜರಿರುತ್ತಾರೆ. ವಿಡಿಯೊ ಸಹ ಮಾಡಿಕೊಳ್ಳುತ್ತಾರೆ. ಆದರೆ, ಮಕ್ಕಳ ಬಳಕೆ ಮಾಡಿರುವವರ ವಿರುದ್ಧ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಆರೋಪಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದಲ್ಲಿ ಮಕ್ಕಳು: ಕಾಂಗ್ರೆಸ್ ಅಭ್ಯರ್ಥಿ ಯಾಸೀರಅಹ್ಮದ್ ಖಾನ್ ಪಠಾಣ ಅವರು ಇತ್ತೀಚೆಗೆ ಲಕ್ಕಿಕೊಪ್ಪ, ಹನಕನಹಳ್ಳಿ ಗ್ರಾಮಗಳಲ್ಲಿ ಪ್ರಚಾರ ಕೈಗೊಂಡಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳು, ಪಕ್ಷದ ಬಾವುಟ ಹಿಡಿದು ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಕರಪತ್ರಗಳನ್ನೂ ಹಂಚಿದ್ದರು. ಇದರ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಗ್ರಾಮದ ಮುಖಂಡರು, ಮಕ್ಕಳನ್ನು ಪ್ರಚಾರಕ್ಕೆ ಕರೆಸಿದ್ದರೆಂದು ಹೇಳಲಾಗುತ್ತಿದೆ. ಪ್ರಚಾರದಲ್ಲಿ ಮಕ್ಕಳು ಪಾಲ್ಗೊಂಡಿದ್ದ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪಠಾಣ ಲಭ್ಯರಾಗಲಿಲ್ಲ.

ಗಂಭೀರ ಪ್ರಕರಣ: ‘ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು ಬಾಲ ಕಾರ್ಮಿಕ ನಿಷೇಧ ಕಾಯ್ದೆಯಡಿ ಅಪರಾಧವಾಗುತ್ತದೆ. ಸಂಬಂಧಪಟ್ಟ ಅಭ್ಯರ್ಥಿ ಹಾಗೂ ಪಕ್ಷದ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆ’ ಎಂದು ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಹೇಳಿದರು.

‘ಶಿಗ್ಗಾವಿ ಚುನಾವಣೆಯ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಸದ್ಯಕ್ಕೆ ಯಾವುದೇ ದೂರುಗಳು ಬಂದಿಲ್ಲ. ಪ್ರಚಾರದ ಸ್ಥಳಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ ಪರಿಶೀಲನೆ ನಡೆಸಲಾಗುವುದು’ ಎಂದು ತಿಳಿಸಿದರು.

Highlights - ಬಾವುಟ ಹಿಡಿದು ಮಕ್ಕಳ ಓಡಾಟ ಕರಪತ್ರ ಹಂಚುವ ಮಕ್ಕಳು ಮಕ್ಕಳನ್ನು ಕರೆತರುವ ಮುಖಂಡರು

‘ಆಯೋಗದಿಂದ ಸ್ವಯಂಪ್ರೇರಿತ ದೂರು’

‘ಚುನಾವಣೆಯ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿಲ್ಲ. ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ’ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ತಿಳಿಸಿದರು. ಚುನಾವಣೆ ಪ್ರಚಾರದಲ್ಲಿ ಮಕ್ಕಳ ಬಳಕೆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು ‘ಮಕ್ಕಳ ಬಳಕೆ ಖಚಿತವಾದರೆ ಅಭ್ಯರ್ಥಿ ಹಾಗೂ ಪಕ್ಷದ ವಿರುದ್ಧ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲು ಶಿಫಾರಸು ಮಾಡಲಾಗುವುದು. ಆಯೋಗದಲ್ಲಿ ಸ್ವಯಂ ದೂರು ದಾಖಲಿಸಿಕೊಳ್ಳಲಾಗುವುದು’ ಎಂದರು.

‘ಪೋಷಕರ ಜೊತೆ ಬರುವ ಮಕ್ಕಳು’

‘ಅಭ್ಯರ್ಥಿಗಳ ಪ್ರಚಾರದ ಸಂದರ್ಭದಲ್ಲಿ ಪೋಷಕರ ಜೊತೆ ಮಕ್ಕಳು ಬರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮಕ್ಕಳ ಕೈಗೆ ಬಾವುಟ ಹಾಗೂ ಕರಪತ್ರ ನೀಡಲಾಗುತ್ತಿದೆ’ ಎಂದು ಪಕ್ಷವೊಂದರ ಮುಖಂಡರು ತಿಳಿಸಿದರು. ‘ಪ್ರತಿಯೊಂದು ಗ್ರಾಮಗಳಲ್ಲಿಯೂ ಮಕ್ಕಳು ಗುಂಪು ಗುಂಪಾಗಿ ಬರುತ್ತಿದ್ದಾರೆ. ಅವರನ್ನು ಬರದಂತೆ ತಡೆಯಲು ಆಗುವುದಿಲ್ಲ. ಪೋಷಕರೂ ಅವರ ಜೊತೆಗಿರುತ್ತಾರೆ. ಮಕ್ಕಳ ಕಾಳಜಿಯನ್ನು ಅವರೇ ಮಾಡುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.