ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ವಾಪಸು ಪಡೆದಿದ್ದಾರೆ.

ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಜಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ ಜೊತೆಯಲ್ಲಿ ಬುಧವಾರ ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ಬಂದರು.

ಸಚಿವರು, ಶಾಸಕರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿಯೇ ಖಾದ್ರಿ ಅವರು ನಾಮಪತ್ರ ವಾಪಸು ಪಡೆದರು.

ನಾಮಪತ್ರ ವಾಪಸ್ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಖಾದ್ರಿ, ‘ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು ಜನಪರವಾಗಿವೆ. ಸಿದ್ದರಾಮಯ್ಯ ಅವರ ಶಿಷ್ಯ ನಾನು. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ’ ಎಂದರು.
.ಶಿಗ್ಗಾವಿ ಉಪಚುನಾವಣೆ: ‘ಕೈ’ ಅಭ್ಯರ್ಥಿ ಗೆಲ್ಲಿಸಲು ಪಣ.ಶಿಗ್ಗಾವಿ ಉಪಚುನಾವಣೆ | ಬೆಂಗಳೂರಿನಲ್ಲಿ ಖಾದ್ರಿ ಮೊಕ್ಕಾಂ.ಶಿಗ್ಗಾವಿ: ಸಚಿವ ಜಮೀರ್ ಮನವೊಲಿಕೆ ಯಶಸ್ವಿ– ನಾಮಪತ್ರ ಹಿಂಪಡೆಯಲು ಖಾದ್ರಿ ಒಪ್ಪಿಗೆ.ಶಿಗ್ಗಾವಿ ಉಪ ಚುನಾವಣೆ | ರಂಗೇರಿದ ಕಣ: 26 ಅಭ್ಯರ್ಥಿಗಳು, 46 ನಾಮಪತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.