ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರು ನಾಮಪತ್ರ ಸಲ್ಲಿಸಿ, ಮುಖಂಡರ ಜೊತೆ ಶಿಗ್ಗಾವಿಯಲ್ಲಿ ಮೆರವಣಿಗೆ ನಡೆಸಿದರು.

ಮೆರವಣಿಗೆಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಪಠಾಣ, 'ಬಸವರಾಜ ಬೊಮ್ಮಾಯಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಮನೆ ಕೊಟ್ಟಿರುವುದಾಗಿ ಹೇಳಿಕೊಂಡು ಓಡಾಡುತ್ತಿದ್ದಾರೆ. ಅವರು ಒಂದೇ ಒಂದು ಮನೆ ಕೊಟ್ಟಿದ್ದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ' ಎಂದು ಸವಾಲು ಹಾಕಿದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, 'ಬೇರೆಯವರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿಕೊಂಡೇ ಬಸವರಾಜ ಬೊಮ್ಮಾಯಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಿದ್ದಾರೆ. ಬೇರೆಯವರಿಗೆ ಹೆಣ್ಣು ನೋಡಲು ಹೋದ ಅವರು, ತಾವೇ ಮದುವೆಯಾಗಿ ಬಂದಿದ್ದಾರೆ' ಎಂದು ವ್ಯಂಗ್ಯವಾಡಿದರು.

ಸಚಿವ ಸತೀಶ ಜಾರಕಿಹೊಳಿ, 'ಕಾಂಗ್ರೆಸ್ ಗೆಲುವು ಖಚಿತ. ನಾನು ನಿಮ್ಮ ಜೊತೆ ಕ್ಷೇತ್ರದಲ್ಲಿ ಇರುವೆ. ಮನೆ ಮನೆಗೆ ಹೋಗಿ ಪ್ರಚಾರ ಮಾಡುವೆ' ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.