ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ 40,024 ಕ್ವಿಂಟಲ್ (1,60,097 ಚೀಲ) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳ ಕಂಡು ಬಂದಿದೆ.

ಕಳೆದ ಗುರುವಾರ ಮಾರುಕಟ್ಟೆಗೆ 38,692 ಕ್ವಿಂಟಲ್ (1,54,769 ಚೀಲ) ಆವಕವಾಗಿತ್ತು. ಪ್ರಸಕ್ತ ಹಂಗಾಮಿನಲ್ಲಿ 3ನೇ ಬಾರಿಗೆ 1.5 ಲಕ್ಷ ಚೀಲ ಆವಕವಾದಂತಾಗಿದೆ. ಸೋಮವಾರ ಒಟ್ಟು 24,217 ಲಾಟ್‌ಗಳಷ್ಟು ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟವಿಲ್ಲದ 459 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ.

5 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹60,199ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ಕಳೆದ ಗುರುವಾರಕ್ಕಿಂತ ಕ್ವಿಂಟಲ್‌ಗೆ ₹3 ಸಾವಿರ ಹೆಚ್ಚಳವಾಗಿದೆ. 4 ಚೀಲ ಕಡ್ಡಿ ಮೆಣಸಿನಕಾಯಿ ₹56,591ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ಕಳೆದ ಗುರುವಾರಕ್ಕಿಂತ ಕ್ವಿಂಟಲ್‌ಗೆ ₹2 ಸಾವಿರ ಇಳಿಕೆ ಕಂಡು ಬಂದಿದೆ. ಗುಂಟೂರ ತಳಿ ಮೆಣಸಿನಕಾಯಿ ₹18,299ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ಸ್ಥಿರತೆ ಕಾಯ್ದುಕೊಂಡಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹41,529, ಬ್ಯಾಡಗಿ ಕಡ್ಡಿ ₹37,589 ಹಾಗೂ ಗುಂಟೂರ ತಳಿ ₹14,600ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 406 ಖರೀದಿ ವರ್ತಕರು ಪಾಲ್ಗೊಂಡಿದ್ದು, ಒಟ್ಟಾರೆ 2.06 ಬಾರಿ ದರವನ್ನು ಕೋಟ್ ಮಾಡಿದ್ದಾರೆ ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.