ಹಿರೇಮಾಗನೂರು (ತುಮ್ಮಿನಕಟ್ಟಿ): ರೈತರು ತಮ್ಮ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ಲಸಿಕೆ ಹಾಕಿಸಬೇಕು ಎಂದು ತಾಲ್ಲೂಕು ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜನಗೌಡ ಪಾಟೀಲ ಹೇಳಿದರು.

ಗ್ರಾಮದಲ್ಲಿ ಪಶುಸಂಗೋಪನಾ ಇಲಾಖೆ ವತಿಯಿಂದ ಗುರುವಾರ ನಡೆದ ರಾಷ್ಟ್ರೀಯ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬದುಕಿಗೆ ಚೈತನ್ಯ ನೀಡುವ ರಾಸುಗಳ ಸಂರಕ್ಷಣೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಕಷ್ಟದ ಕಾಲದಲ್ಲಿ ಕೈ ಹಿಡಿದು ನಮ್ಮ ಏಳಿಗೆಗೆ ಸಹಕಾರ ನೀಡುವ ಇವುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಹಿರಿಯ ಪಶು ವೈದ್ಯಾಧಿಕಾರಿ ಯುವರಾಜ್ ಚವ್ಹಾಣ, ಪಶು ಪರಿವೀಕ್ಷಕ ಡಿ.ಕುಮಾರ ಹಾಗೂ ಇಲಾಖೆಯ ಸಿಬ್ಬಂದಿ ಗ್ರಾಮದ ಒಟ್ಟು 317 ರಾಸುಗಳಿಗೆ ಲಸಿಕೆ ಹಾಕಿದರು.

ಜೆ.ಎಂ.ಪಾಟೀಲ್, ಭೀಮನಗೌಡ ಮುದಿಗೌಡ್ರ, ಶಿವನಗೌಡ ಅಯ್ಯಳ್ಳವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.