ಹಾವೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.

‘ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 26 ಹಾಗೂ 27ರಂದು ರಜೆ ಘೋಷಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ನಿರಂತರ ಮಳೆಯಿಂದಾಗಿ ಶೀತಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ರಜೆ ನೀಡುವುದು ಸೂಕ್ತವೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಿದ್ದರು. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ರಜೆ ಘೋಷಿಸಲಾಗಿದೆ. ಈ ಆದೇಶದಲ್ಲಿ ಎಲ್ಲರೂ ಪಾಲಿಸಬೇಕು’ ಎಂದು ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.