ಹಾವೇರಿ: ‘ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಅಭ್ಯಾಸದ ಜೊತೆಗೆ ಕಾನೂನುಗಳ ಅರಿವು ಕೂಡ ಇರಬೇಕು. ಸಾಮಾಜಿಕ ಬದಲಾವಣೆ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಯುನಿಸೆಫ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಗರದ ಸಿ.ಬಿ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ‘ಮಕ್ಕಳ ಹಕ್ಕುಗಳು ಹಾಗೂ ಪೋಕ್ಸೊ ಕಾಯ್ದೆ-2012ರ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಹೆಚ್. ಮಜೀದ್ ಮಾತನಾಡಿ, ‘1989ರಲ್ಲಿ ವಿಶ್ವಸಂಸ್ಥೆ ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು ಅಂಗೀಕರಿಸಿ ಜಾರಿಗೆ ತಂದಿದೆ. ಆದರೆ ಮಕ್ಕಳಿಗೆ ಸಿಗಬೇಕಾಗಿರುವ ಹಕ್ಕುಗಳು ಸರಿಯಾಗಿ ಸಿಗುತ್ತಿಲ್ಲ. ವಿಶ್ವದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳ ಪ್ರಮಾಣ ಹೆಚ್ಚಾಗುತ್ತಿವೆ. ಇಂದಿನ ಶಿಕ್ಷಣವು ಅಂಕಗಳಿಗೆ ಸೀಮಿತವಾಗಿದೆ. ಮಾನವೀಯ ಮೌಲ್ಯಗಳು, ಬದುಕನ್ನು ರೂಪಿಸುವ ಶಿಕ್ಷಣದ ಅಗತ್ಯವಿದೆ ಎಂದು ಹೇಳಿದರು.

ಮಕ್ಕಳ ಸಹಾಯವಾಣಿ ಕೇಂದ್ರದ ನಿರ್ದೇಶಕಿ ಗೀತಾ ಪಾಟೀಲ್, ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಚನ್ನಪ್ಪ ಮಾತನಾಡಿದರು. ಮಕ್ಕಳ ವಿಶೇಷ ಪೊಲೀಸ್ ಸಿಬ್ಬಂದಿ ಎಂ.ಆರ್. ಜಾಲಗಾರ್ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ (ಪೋಕ್ಸೊ) ಕಾಯ್ದೆ-2012ರ ಬಗ್ಗೆ ಉಪನ್ಯಾಸ ನೀಡಿದರು. ಜ್ಯೋತಿ ಆನಿಶೆಟ್ಟೆರ ಅವರು ಮಕ್ಕಳ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಿದರು.

ಮಂಜುನಾಥ ರಾಯದುರ್ಗದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕವಿತಾ ಕೋರಿ ನಿರೂಪಿಸಿದರು. ಅಶ್ವಿನಿ ಪಾಟೀಲ್ ಸ್ವಾಗತಿಸಿದರು. ಪ್ರದೀಪ ಕುಂದಗೋಳ ಅವರು ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.