ಕಲಬುರಗಿ: ಆಳಂದ ತಾಲ್ಲೂಕಿನ ಗ್ರಾಮವೊಂದರ ಒಂದೂವರೆ ವರ್ಷದ ಹೆಣ್ಣು ಮಗು ಸಂಶಯಾಸ್ಪದವಾಗಿ ಬುಧವಾರ ಮೃತಪಟ್ಟಿದ್ದು, ವೈದ್ಯಕೀಯ ಚಿಕಿತ್ಸೆಯಲ್ಲಿ ಉಲ್ಲೇಖಿಸಲಾದ ಲೈಂಗಿಕ ದೌರ್ಜನ್ಯದ ಶಂಕೆಗೆ ನರೋಣಾ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
.ಮಗುವಿನ ಭವಿಷ್ಯಕ್ಕೆ ಭಾಷ್ಯ ಬರೆದ ಹೈಕೋರ್ಟ್: ಪೋಕ್ಸೊ ಸುಖಾಂತ್ಯಕ್ಕೆ ಪಾಣಿಗ್ರಹಣ.
ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿಲ್ಲ. ಅನುಮಾನಗೊಂಡ ವೈದ್ಯರು ಎಂಎಲ್ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ, ಲೈಂಗಿಕ ದೌರ್ಜನ್ಯದ ಶಂಕೆ ವ್ಯಕ್ತಪಡಿಸಿದ್ದರು. ಅದೇ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
.ಪೋಕ್ಸೊ ಪ್ರಕರಣದ ಆರೋಪಿಗಳ ರಕ್ಷಣೆ ಆರೋಪ: ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ.
ಲೈಂಗಿಕ ದೌರ್ಜನ್ಯದ ಶಂಕೆಯಡಿ ದೂರು ಕೊಡಲು ಮಗುವಿನ ಪೋಷಕರು ಮುಂದಾಗಲಿಲ್ಲ. ಪೊಲೀಸರು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಯ ನಿರಂತರ ಮನವರಿಕೆಗೂ ಸ್ಪಂದಿಸಲಿಲ್ಲ. ಕೊನೆಗೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಲೈಂಗಿಕ ದೌರ್ಜನ್ಯದ ಶಂಕೆ ದೃಢಪಟ್ಟರೆ ತನಿಖೆಯನ್ನು ಮುಂದುವರೆಸುತ್ತೇವೆ ಎಂದು ಮೂಲಗಳು ಹೇಳಿವೆ.

ಮಗುವಿನ ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
.ಬಾಲಕಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕಿ ವಿರುದ್ಧ ಪೋಕ್ಸೊ ಪ್ರಕರಣ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.