ಕಲಬುರಗಿ: ‘ಬೆಂಗಳೂರಿನ ಪ್ರಧಾನ ನೇಮಕಾತಿ ವಲಯ ಕಚೇರಿ ಹಾಗೂ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನ.26ರಿಂದ ಡಿಸೆಂಬರ್ 8ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ ಆಯೋಜಿಸಲಾಗಿದೆ’ ಎಂದು ಬೆಳಗಾವಿ ಸೇನಾ ನೇಮಕಾತಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮನ್, ಅಗ್ನಿವೀರ್ ಕ್ಲರ್ಕ್/ ಸ್ಟೋರ್ ಕೀಪರ್, ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿ ರ‍್ಯಾಲಿ ನಡೆಯಲಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರ ಹಾಗೂ ಕೊಪ್ಪಳ ಜಿಲ್ಲೆಗಳ ಅಭ್ಯರ್ಥಿಗಳಿಗಾಗಿ ಈ ನೇಮಕಾತಿ ರ‍್ಯಾಲಿ ಆಯೋಜಿಸಲಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು joinindianarmy.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಅ.10ರಿಂದ ಶಾರ್ಟ್ ಲಿಸ್ಟ್‌ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ನೀಡಲಾಗುತ್ತದೆ. ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೊಳಗಾಗಬಾರದು. ನೇಮಕಾತಿ ಪರೀಕ್ಷೆ ಹಾಗೂ ಅಂತಿಮ ಅರ್ಹತೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.