ಕಲಬುರಗಿ: ಪಹಣಿ ಪತ್ರಗಳಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಿಸಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ವಕ್ಫ್ ಗೆಜೆಟ್ ನೋಟಿಫಿಕೇಷನ್ ಹಿಂಪಡೆದು ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಉಚ್ಚಾಟಿಸಿಬೇಕು ಎಂದು ಆಗ್ರಹಿಸಿದರು.

ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ (ಎಸ್ವಿಪಿ) ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ವಕ್ಫ್ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನಮೂದಿಸಿರುವುದನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು. ಎಸ್ವಿಪಿ ವೃತ್ತದಿಂದ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರೈತರ, ಮಠಮಾನ್ಯಗಳ, ಹಿಂದೂ ಸಮುದಾಯದಾಯಗಳ ಕೃಷಿಕರ ಆಸ್ತಿ ಪತ್ರಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೂ ಕುಮ್ಮಕ್ಕು ನೀಡುತ್ತಿದೆ. ಮುಸ್ಲಿಮರ ತುಷ್ಟೀಕರಣಕ್ಕಾಗಿ ವಕ್ಫ್ ಮಂಡಳಿ ಜತೆಗೆ ಸೇರಿಕೊಂಡಿರುವ ರಾಜ್ಯ ಸರ್ಕಾರವು ರೈತರ ಜಮೀನು ಕಳಬಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ವಕ್ಫ್ ಮಂಡಳಿಯಲ್ಲಿನ ಅಕ್ರಮಗಳನ್ನು ಗಮನದಲ್ಲಿ ಇರಿಸಿಕೊಂಡು ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ, ಮಸೂದೆ ಪರಿಶೀಲಿಸಲು ಸಂಸತ್ತಿನ ಜಂಟಿ ಸದನ ಸಮಿತಿಯನ್ನೂ ರಚಿಸಿದೆ. ತಿದ್ದುಪಡಿ ಕಾಯ್ದೆ ಖಚಿತವಾಗುತ್ತಿದ್ದಂತೆ ವಕ್ಫ್ ಮಂಡಳಿಯು ಸಾರ್ವಜನಿಕರ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ ಎಂದು ದೂರಿದರು.

ವಕ್ಫ್ ಮಂಡಳಿ ತಂದಿಟ್ಟಿರುವ ಈ ಗೊಂದಲದಿಂದಾಗಿ ರಾಜ್ಯದಲ್ಲಿನ ಸಾಮರಸ್ಯ ಹದಗೆಡುತ್ತಿದೆ. ಸರ್ಕಾರದ ವಿವೇಚನೆ ರಹಿತ ನಿರ್ಧಾರಗಳಿಂದಾಗಿ ಹಲವರ ಆಸ್ತಿ ವ್ಯಾಜ್ಯಗಳು ಬೀದಿಗೆ ಬಂದಿವೆ. ಈಗಾಗಲೇ ಕಡಕೋಳದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಆರಂಭವಾಗಿದೆ. ಇದು ಇಡೀ ರಾಜ್ಯವನ್ನು ವ್ಯಾಪಿಸುವ ಸಾಧ್ಯತೆಯಿದೆ. ರೈತರ ಹಿತದೃಷ್ಟಿಯನ್ನು ಬದಿಗಿಟ್ಟಿರುವ ಸಿದ್ದರಾಮಯ್ಯ ಅವರು, ಅಲ್ಪಸಂಖ್ಯಾತರನ್ನು ಓಲೈಸುವಲ್ಲಿ ನಿರತವಾಗಿದೆ ಎಂದರು.

ಇದೇ ರೀತಿಯ ಗೊಂದಲ ಮುಂದುವರಿಸಿದರೆ ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ. ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲಿಮರ ಓಲೈಕೆ ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ಹಳೇ ಚಾಳಿಯನ್ನು ಕಾಂಗ್ರೆಸ್ ನಾಯಕರು ಕೈಬಿಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣಾ ತಂತ್ರಗಾರಿಕೆಯಾಗಿದೆ. ಈ ತಂತ್ರಗಾರಿಕೆಯನ್ನು ಬಿಜೆಪಿ ಒಪ್ಪುವುದಿಲ್ಲ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಲಿದೆ ಎಂದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಶಾಸಕ ಡಾ.ಅವಿನಾಶ ಜಾಧವ, ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಸಚಿನ್ ಕಡಗಂಚಿ, ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮುಖಂಡರಾದ ಅಮರನಾಥ ಪಾಟೀಲ, ಉಮೇಶ ಪಾಟೀಲ, ಮಹದೇವ ಬೆಳಮಗಿ, ಶಿವುಯೋಗಿ ನಾಗನಹಳ್ಳಿ, ಅಪ್ಪು ಕಣಕಿ, ಅಂಬದಾಸ್ ಕುಲಕರ್ಣಿ, ಶುಭಾ ಪಾಟೀಲ, ರಾಜೇಶ್ವರಿ ಮೈತ್ರಿ, ಸುವರ್ಣ ವಾಡೆ, ಸವಿತಾ ಪಾಟೀಲ, ಡಾ.ಸುಧಾ ಹಾಲಕಾಯಿ ಸೇರಿ ಹಲವರು ಪಾಲ್ಗೊಂಡಿದ್ದರು.

ಜಮೀರ್ ಅಹಮದ್ ಖಾನ್ ಅವರು ಅಧಿಕಾರಿಗಳ ಸಭೆ ನಡೆಸಿ ನೋಟಿಸ್ ಕೊಡದೆ ಇದ್ದರೆ ವರ್ಗಾವಣೆ ಮಾಡುವ ಕೇಸ್ ಹಾಕುವ ಬೆದರಿಕೆ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೂ ಬೆಂಬಲ ನೀಡಿದ್ದು ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ
ಚಂದು ಪಾಟೀಲ ಬಿಜೆಪಿ ನಗರ ಘಟಕದ ಅಧ್ಯಕ್ಷ

ಬೇಡಿಕೆಗಳು

* ಜಮೀರ್ ಅಹಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ಉಚ್ಚಾಟಿಸಬೇಕು.

* ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಿ ಸ್ಪಷ್ಟನೆ ಕೊಡಬೇಕು.

* ಇನ್ನು ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು. ಇದಕ್ಕೆ ಸಂಬಂಧಿಸಿದ ವಕ್ಫ್ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಬೇಕು.

* ಕೇಂದ್ರ ಸರ್ಕಾರವು ತರುತ್ತಿರುವ ವಕ್ಸ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರವು ಮುಂದಿನ ಅಧಿವೇಶನದಲ್ಲಿ ಒಮ್ಮತದಿಂದ ನಿರ್ಣಯವನ್ನು ಅಂಗೀಕರಿಸಿ ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.