ಕಲಬುರಗಿ: ‘ಇಂದಿನ ಯುವಪೀಳಿಗೆಗೆ ಜೀವನ ಮೌಲ್ಯಗಳನ್ನು ಕಲಿಸಿಕೊಡಬೇಕಾಗಿದೆ’ ಎಂದು ಸಾಹಿತಿ ಸ್ವಾಮಿರಾವ ಕುಲಕರ್ಣಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಜಿಲ್ಲಾ ಘಟಕದ ಅಧ್ಯಕ್ಷರಾಗಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಲ್ಲಿನ ಕನ್ನಡ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಭಾವ ಸಮ್ಮಿಲನ ಕಾರ್ಯಕ್ರಮದಲ್ಲಿ ಧರ್ಮಣ್ಣ ಎಚ್. ಧನ್ನಿ ಸಂಪಾದಕತ್ವದ ‘ವಿಜಯೀಭವ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯುವ ಪೀಳಿಗೆಯು ಮೊಬೈಲ್ ಬಿಟ್ಟು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು. ಕನ್ನಡದ ಪ್ರೀತಿ, ಸಂಸ್ಕೃತಿ ಹಾಗೂ ಮಾನವೀಯತೆ ಸಂಬಂಧಗಳನ್ನು ಗಟ್ಟಿಗೊಳಿಸಬೇಕು’ ಎಂದರು.

ಪುಸ್ತಕ ಬಿಡುಗಡೆ ಮಾಡಿದ ಡಾ. ಪ್ರತೀಮಾ ಎಸ್.ಕಾಮರೆಡ್ಡಿ, ‘ಮಕ್ಕಳಲ್ಲಿ ಓದುವ ಸಂಸ್ಕೃತಿ ಬೆಳೆಸಲು ಗ್ರಂಥಾಲಯ ನಿರ್ಮಾಣಕ್ಕೆ ಆರ್ಥಿಕ ಸಹಾಯ ಮಾಡುತ್ತೇನೆ’ ಎಂದರು.

ಪಾಳಾ ಕಟ್ಟಿಮನಿ ಹಿರೇಮಠ ಸಂಸ್ಥಾನದ ಗುರುಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲ ರೆಡ್ಡಿ ಮುನ್ನೂರ, ಡಿಎಚ್ಒ ಡಾ. ಶರಣಬಸಪ್ಪ ಕ್ಯಾತನಾಳ, ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಸಿದ್ಧಲಿಂಗ ಜಿ.ಬಾಳಿ, ಶಕುಂತಲಾ ಪಾಟೀಲ ಜಾವಳಿ, ರಾಜೇಂದ್ರ ಮಾಡಬೂಳ, ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ಗಣೇಶ ಚಿನ್ನಾಕಾರ, ಜಗದೀಶ ಮರಪಳ್ಳಿ, ಸುರೇಶ ದೇಶಪಾಂಡೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.