ಸೇಡಂ (ಕಲಬುರಗಿ ಜಿಲ್ಲೆ): ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಸದಾಶಿವ ಸ್ವಾಮೀಜಿ ಅನಾರೋಗ್ಯ ಸಮಸ್ಯೆಯಿಂದಾಗಿ ಮಂಗಳವಾರ ರಾತ್ರಿ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ಇಡೀ ದಿನ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ರಾತ್ರಿ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಯಿತು. ರಾತ್ರಿ 9ರ ಸುಮಾರಿಗೆ ದೇವಾಲಯದ ಭಕ್ತರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ತಪಾಸಣೆ ಮಾಡಿದ ವೈದ್ಯರು, ಸ್ವಾಮೀಜಿಗೆ ಬ್ರೈನ್ ಹೆಮರೇಜ್ ಆಗಿರುವುದಾಗಿ ತಿಳಿಸಿದ್ದಾರೆ ಎಂದು ಭಕ್ತರು ತಿಳಿಸಿದ್ದಾರೆ.

ಪ್ರಸ್ತುತ ಸದಾಶಿವ ಸ್ವಾಮೀಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಸಮಿತಿಯ ಆಡಳಿತ ವರ್ಗ, ಸಿಬ್ಬಂದಿ, ಸದಸ್ಯರು, ಶಿಕ್ಷಕರು ಹಾಗೂ ದೇವಲಯದ ಭಕ್ತರು ಆತಂಕಕ್ಕೆ ಒಳಗಾಗಬಾರದು. ಅವರ ಆರೋಗ್ಯದ ಚೇತರಿಕೆಗೆ ಪ್ರಾರ್ಥಿಸಬೇಕು. ಆಸ್ಪತ್ರೆಗೆ ತೆರಳದಂತೆ ಶಿಕ್ಷಣ ಸಮಿತಿ ಸಂರಕ್ಷಕ ಬಸವರಾಜ ಪಾಟೀಲ ಸೇಡಂ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.