ಕಲಬುರ್ಗಿ: ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಅಪರೇಷನ್ ಕಮಲ ಆಡಿಯೊ ಪ್ರಕರಣದ ವಿಚಾರಣೆಯನ್ನು ಕಲಬುರ್ಗಿ ಹೈಕೋರ್ಟ್ ಇದೇ 28ಕ್ಕೆ ಮುಂದೂಡಿದೆ.

ದೇವದುರ್ಗ ಪ್ರವಾಸಿಮಂದಿರದಲ್ಲಿ ಆಪರೇಶನ್ ಕಮಲದ ಭಾಗವಾಗಿ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಅವರಿಗೆ ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕರೆ ಮಾಡಿದ್ದ ಯಡಿಯೂರಪ್ಪ ಅವರುಪಕ್ಷಕ್ಕೆ ಬಂದರೆ ₹ 10 ಕೋಟಿ ಹಣ ನೀಡುವುದಾಗಿ ದೂರವಾಣಿ ಕರೆ ಮಾಡಿ ತಿಳಿಸಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವಿಗೆ ಆಗ್ರಹಿಸಿ ಶರಣಗೌಡ ಅವರು ಮನವಿ ಸಲ್ಲಿಸಿದ್ದಾರೆ. ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಹ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಜರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.